ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹184 ಕೋಟಿ ಆಸ್ತಿ ತೆರಿಗೆ ಸಂಗ್ರಹ

Last Updated 6 ಡಿಸೆಂಬರ್ 2018, 19:11 IST
ಅಕ್ಷರ ಗಾತ್ರ

ಬೆಂಗಳೂರು: ‘ಪಾಲಿಕೆಯ ಎಂಟು ವಲಯಗಳಲ್ಲಿ ಎರಡು ತಿಂಗಳಲ್ಲಿ ಒಟ್ಟು ₹ 184 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ’ ಎಂದು ಮೇಯರ್‌ ಗಂಗಾಂಬಿಕೆ ತಿಳಿಸಿದರು.

‘ಪ್ರಸಕ್ತ ಸಾಲಿನ ₹ 102. 56 ಕೋಟಿ ಹಾಗೂ ಹಳೆ ಬಾಕಿ ₹ 81.44 ಕೋಟಿ ಆಸ್ತಿ ತೆರಿಗೆ ವಸೂಲಿ ಮಾಡಲಾಗಿದೆ’ ಎಂದು ಮೇಯರ್‌ ಮಾಹಿತಿ ನೀಡಿದರು.

ಗಂಗಾಂಬಿಕೆ ಅವರು ಬಾಕಿ ತೆರಿಗೆ ವಸೂಲಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಕುರಿತುಎಲ್ಲ ವಲಯ ಕಚೇರಿಗಳಲ್ಲಿ ವಿಶೇಷ ಸಭೆ ನಡೆಸಿದ್ದ ಅವರು, ತೆರಿಗೆ ವಸೂಲಿಗೆ ಪ್ರತಿ ಬುಧವಾರ ವಿಶೇಷ ಅಭಿಯಾನ ನಡೆಸುವಂತೆ ಸಲಹೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT