₹184 ಕೋಟಿ ಆಸ್ತಿ ತೆರಿಗೆ ಸಂಗ್ರಹ

7

₹184 ಕೋಟಿ ಆಸ್ತಿ ತೆರಿಗೆ ಸಂಗ್ರಹ

Published:
Updated:

ಬೆಂಗಳೂರು: ‘ಪಾಲಿಕೆಯ ಎಂಟು ವಲಯಗಳಲ್ಲಿ ಎರಡು ತಿಂಗಳಲ್ಲಿ ಒಟ್ಟು ₹ 184 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ’ ಎಂದು ಮೇಯರ್‌ ಗಂಗಾಂಬಿಕೆ ತಿಳಿಸಿದರು.

‘ಪ್ರಸಕ್ತ ಸಾಲಿನ ₹ 102. 56 ಕೋಟಿ ಹಾಗೂ ಹಳೆ ಬಾಕಿ ₹ 81.44 ಕೋಟಿ ಆಸ್ತಿ ತೆರಿಗೆ ವಸೂಲಿ ಮಾಡಲಾಗಿದೆ’ ಎಂದು ಮೇಯರ್‌ ಮಾಹಿತಿ ನೀಡಿದರು. 

ಗಂಗಾಂಬಿಕೆ ಅವರು ಬಾಕಿ ತೆರಿಗೆ ವಸೂಲಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಕುರಿತು ಎಲ್ಲ ವಲಯ ಕಚೇರಿಗಳಲ್ಲಿ ವಿಶೇಷ ಸಭೆ ನಡೆಸಿದ್ದ ಅವರು, ತೆರಿಗೆ ವಸೂಲಿಗೆ ಪ್ರತಿ ಬುಧವಾರ ವಿಶೇಷ ಅಭಿಯಾನ ನಡೆಸುವಂತೆ ಸಲಹೆ ನೀಡಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !