ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣ್ಣು ಕುಸಿತ: ಸೇತುವೆ ದುರಸ್ತಿಗೆ ಆಗ್ರಹ

Last Updated 17 ಜೂನ್ 2018, 12:32 IST
ಅಕ್ಷರ ಗಾತ್ರ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ಔಷಧೀಯ ಸಸ್ಯಗಳ ಪ್ರಾತ್ಯಕ್ಷಿಕೆ ವನದ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ತಳಭಾಗ ಹಾಗೂ ರಸ್ತೆಯ ಬದಿ ಈಚೆಗೆ ಸುರಿದ ಮಳೆಯಿಂದ ಕುಸಿದಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ದೇವಸ್ಥಾನದಲ್ಲಿ ಪ್ರತೀ ಶನಿವಾರ ವಿಶೇಷ ಪೂಜೆ ಇರುವ ಕಾರಣ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಬರುತ್ತಾರೆ. ಹಾಗಾಗಿ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಓಡಾಡುತ್ತವೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸೇತುವೆ ಮಣ್ಣು ಕುಸಿದಿದ್ದು, ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.

ಈ ಸ್ಥಳದಲ್ಲಿ ಹೊಸದಾಗಿ ಪಾಲ ನಿರ್ಮಿಸಲಾಗಿದೆ. ಆದರೆ, ಮಳೆಯಿಂದ ಮಣ್ಣು ಕುಸಿದು, ಅಪಾಯ ಕಾದಿದೆ. ಮಣ್ಣು ಕುಸಿತದಿಂದ ಸವಾರರಿಗೆ ಕಷ್ಟವಾ ಗಲಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನ ಹರಿಸಿ ದುರಸ್ತಿಗೆ ಕ್ರಮವಹಿಸಬೇಕು ಎಂದು ಪ್ರಯಾಣಿಕರಾದ ಮಹಾದೇವಸ್ವಾಮಿ, ಸಿದ್ದಲಿಂಗಸ್ವಾಮಿ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT