ನಾಗಾರ್ಜುನ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನಲ್ಲಿ ರಕ್ತದಾನ ಶಿಬಿರ
185 ಯೂನಿಟ್ ರಕ್ತ ಸಂಗ್ರಹ

ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಕ್ರಾಸ್ ಸಮೀಪದ ನಾಗಾರ್ಜುನ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನಲ್ಲಿ ಇತ್ತೀಚೆಗೆ ಎನ್ಎಸ್ಎಸ್ ಮತ್ತು ರೆಡ್ಕ್ರಾಸ್ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 185 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ರೆಡ್ಕ್ರಾಸ್ ಉಪಾಧ್ಯಕ್ಷ ಡಾ.ಕೆ.ಪಿ.ಶ್ರೀನಿವಾಸ ಮೂರ್ತಿ, ಪ್ರಾಂಶುಪಾಲ ಶ್ರೀಕಂಠಮೂರ್ತಿ, ಎನ್ಎಸ್ಎಸ್ ವಿಭಾಗದ ಮುಖ್ಯಸ್ಥ ಸನತ್ ಕುಮಾರ್, ಯುವ ರೆಡ್ಕ್ರಾಸ್ ಸಂಸ್ಥೆಯ ಸಂಯೋಜಕ ಜನಾರ್ಧನ್ ಭಟ್, ದೈಹಿಕ ಶಿಕ್ಷಣ ನಿರ್ದೇಶಕ ಇಬ್ರಾಹಿಂ, ಉಪನ್ಯಾಸಕರಾದ ಶಶಿಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಶಿಬಿರದಲ್ಲಿ ಭಾಗವಹಿಸಿದ್ದರು.
ಪ್ರತಿಕ್ರಿಯಿಸಿ (+)