ಬಜರಂಗದಳ ಕಾರ್ಯಕರ್ತ ಸೇರಿ ಇಬ್ಬರ ಬಂಧನ

7
ಸುಳ್ಯದಿಂದ ಕೇರಳಕ್ಕೆ ಅಕ್ರಮ ಗೋಸಾಗಣೆ

ಬಜರಂಗದಳ ಕಾರ್ಯಕರ್ತ ಸೇರಿ ಇಬ್ಬರ ಬಂಧನ

Published:
Updated:
Deccan Herald

ವಿಟ್ಲ: ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಣೆ ಮಾಡುತ್ತಿದ್ದ ಬಜರಂಗದಳದ ಕಾರ್ಯಕರ್ತ ಸೇರಿದಂತೆ ಇಬ್ಬರನ್ನು ಬಂಧಿಸಿರುವ ವಿಟ್ಲ ಠಾಣೆ ಪೊಲೀಸರು, ನಾಲ್ಕು ದನಗಳು ಮತ್ತು ಒಂದು ಕರುವನ್ನು ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ತಾಲ್ಲೂಕಿನ ವಿಟ್ಲ ಪಡ್ನೂರು ಗ್ರಾಮದ ಪಡಾರು ನಿವಾಸಿ ಶಶಿಕುಮಾರ್ ಭಟ್ (48) ಹಾಗೂ ಕೊಳ್ನಾಡು ಗ್ರಾಮದ ಕಟ್ಟತ್ತಿಲ ಮಣ್ಣಗದ್ದೆ ನಿವಾಸಿ ಅಬ್ದುಲ್ ಹಾರೀಸ್(21) ಬಂಧಿತ ಆರೋಪಿಗಳು. ಶಶಿಕುಮಾರ್ ಕೆಲವು ವರ್ಷಗಳಿಂದ ಬಜರಂಗದಳದ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ. ಗೋಹತ್ಯೆ ಮತ್ತು ಗೋಸಾಗಣೆ ವಿರುದ್ಧದ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುತ್ತಿದ್ದ ಆರೋಪಿ, ಗೋರಕ್ಷಕ ಎಂಬುದಾಗಿ ಬಿಂಬಿಸಿಕೊಳ್ಳುತ್ತಿದ್ದ ಎಂದು ದಕ್ಷಿಣ ಕನ್ನಡ ಎಸ್‌ಪಿ ಡಾ.ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.

ಅಬ್ದುಲ್ ಹಾರೀಸ್ ಅಳಿಕೆ ಗ್ರಾಮದಲ್ಲಿ ಕೆಲವು ತಿಂಗಳ ಹಿಂದೆ ನಡೆದ ದನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಅದಲ್ಲದೇ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳು ಸುಳ್ಯ ಕಡೆಯಿಂದ ವಿಟ್ಲ– ಸಾಲೆತ್ತೂರು ಮಾರ್ಗವಾಗಿ ಅಕ್ರಮವಾಗಿ ಜಾನುವಾರುಗಳನ್ನು ಕೇರಳಕ್ಕೆ ಸಾಗಿಸುತ್ತಿರುವ ಕುರಿತು ವಿಟ್ಲ ಠಾಣೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ವಿಟ್ಲ ಪಡ್ನೂರು ಗ್ರಾಮದ ಕಡಂಬು ಬಳಿ ಕಾರ್ಯಾಚರಣೆ ನಡೆಸಿ ಜಾನುವಾರುಗಳ ಸಮೇತ ವಾಹನವನ್ನು ವಶಕ್ಕೆ ಪಡೆದರು. ಆರೋಪಿಗಳು ಜಾನುವಾರುಗಳ ಸಾಗಣೆಗಾಗಿ ಅಶೋಕ್‌ ಲೇಲ್ಯಾಂಡ್ ದೋಸ್ತ್‌ ವಾಹನದ ಬಾಡಿಯ ಎತ್ತರವನ್ನು ಹೆಚ್ಚಿಸಿಕೊಂಡಿದ್ದರು. ಅವರಿಂದ ವಶಕ್ಕೆ ಪಡೆದ ಜಾನುವಾರು ಮತ್ತು ವಾಹನದ ಮೌಲ್ಯ ₹ 5 ಲಕ್ಷ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !