ಶುಕ್ರವಾರ, ಮೇ 29, 2020
27 °C

ನಾಲ್ವರಿಗೆ ಪಿಎಚ್‌.ಡಿ ಪದವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಭೂಗೋಳಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶೇಖರ್ ಅಂಗಡಿ ಅವರು, ಪ್ರೊ.ಡಾ.ಎ.ಎಸ್.ರಾಯಮಾನೆ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್‌.ಡಿ ಪದವಿ ನೀಡಿದೆ.

ವೇದಾವತಿ: ಭೌತಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ವೇದಾವತಿ ಅವರು ಮಂಡಿಸಿದ   ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರು ವಿಶ್ವ ವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿದೆ. ಇವರಿಗೆ ಪ್ರೊ.ಡಾ.ವಿಜಯಕುಮಾರ್ ಎಚ್.ದೊಡ್ಡಮನಿ ಅವರು ಮಾರ್ಗದರ್ಶಕರಾಗಿದ್ದರು.

ಎನ್.ಎಸ್.ಶೋಭಾ: ಬೆಂಗಳೂರು ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಎನ್.ಎಸ್.ಶೋಭಾ ಅವರು, ಪ್ರೊ.ಡಾ.ಕೆ.ಜನಾರ್ದನ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿ
ದ್ದರು. ಈ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ.

ಚನ್ನವೀರಯ್ಯ: ಆಚಾರ್ಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಚನ್ನವೀರಯ್ಯ ಅವರು, ಬೆಂಗ ಳೂರು ವಿಶ್ವವಿದ್ಯಾಲಯದ ಕನ್ನಡ  ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಡಿ.ಕೆ.ಚಿತ್ತಯ್ಯಪೂಜಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರಬಂಧಕ್ಕೆ ಬೆಂಗಳೂರು ವಿವಿ ಪಿಎಚ್‍.ಡಿ ಪದವಿಯನ್ನು ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು