ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿಗಳ ಸೆರೆ ಹಿಡಿದಿದ್ದ 30 ಪೊಲೀಸರಿಗೆ ಸನ್ಮಾನ

ವೈಟ್‌ಫೀಲ್ಡ್‌ ವಿಭಾಗದ ಸಿಬ್ಬಂದಿ ಕೆಲಸಕ್ಕೆ ಡಿಸಿಪಿ ಪ್ರೋತ್ಸಾಹ
Last Updated 4 ಡಿಸೆಂಬರ್ 2018, 19:58 IST
ಅಕ್ಷರ ಗಾತ್ರ

ಬೆಂಗಳೂರು: ವೈಟ್‌ಫೀಲ್ಡ್‌ ವಿಭಾಗ ವ್ಯಾಪ್ತಿಯ ಠಾಣೆಗಳಲ್ಲಿ ದಾಖಲಾಗಿದ್ದ ಹಲವು ಅಪರಾಧ ಪ್ರಕರಣಗಳ ಆರೋಪಿಗಳನ್ನು ಸೆರೆ ಹಿಡಿದಿದ್ದ 30 ಪೊಲೀಸರನ್ನು ಸನ್ಮಾನಿಸಲಾಯಿತು.

ಕೆ.ಆರ್‌.ಪುರ ಬಳಿಯ ಐಟಿಐ ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಿಸಿಪಿ ಅಬ್ದುಲ್ ಅಹದ್, ಪೊಲೀಸರಿಗೆ ಮೈಸೂರು ಪೇಟಾ ತೊಡಿಸಿ ಶಾಲು ಹೊದಿಸಿ ನಗದು ಬಹುಮಾನದೊಂದಿಗೆ ಗೌರವಿಸಿದರು.

‘ಕಳ್ಳತನ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳನ್ನು ಸಿಬ್ಬಂದಿ, ಜೀವದ ಹಂಗು ತೊರೆದು ಬೆನ್ನಟ್ಟಿ ಹಿಡಿದಿದ್ದಾರೆ. ಅವರೆಲ್ಲರ ಕೆಲಸ ಮೆಚ್ಚುವಂಥದ್ದು. ಅವರನ್ನು ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹಿಸಿಸುವುದು ನಮ್ಮೆಲ್ಲರ ಕರ್ತವ್ಯ. ಸನ್ಮಾನಿತ 30 ಸಿಬ್ಬಂದಿಗೂ ನಾಲ್ಕು ದಿನಗಳ ರಜೆ ಸಹಿತ ಪ್ರವಾಸ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ’ ಎಂದು ಅಬ್ದುಲ್ ಅಹದ್ ಹೇಳಿದರು.

‘ಪ್ರಕರಣವೊಂದರ ಆರೋಪಿಗಳು ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ಪರಾರಿಯಾಗಲು ಯತ್ನಿಸಿದ್ದರು. ಅಷ್ಟಾದರೂ ಸಿಬ್ಬಂದಿ, ಆರೋಪಿಗಳನ್ನು ಬೆನ್ನಟ್ಟಿ ಹಿಡಿದಿದ್ದಾರೆ.ಮಕ್ಕಳ ಕಳ್ಳ ಎಂದು ಅಮಾಯಕರ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲು ಯತ್ನಿಸಿ
ದಾಗಲೂ ನಮ್ಮ ಸಿಬ್ಬಂದಿ ರಕ್ಷಿಸಿದ್ದಾರೆ. ಸನ್ಮಾನಿತರ ಕೆಲಸ ಇತರೆ ಸಿಬ್ಬಂದಿಗೂ ಪ್ರೇರಣೆಯಾಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT