ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ: ಆಟೋಟ ಕುಂಠಿತ

7

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ: ಆಟೋಟ ಕುಂಠಿತ

Published:
Updated:
Deccan Herald

ಬೆಂಗಳೂರು: ಹೆಸರಘಟ್ಟ ಮುಖ್ಯರಸ್ತೆಯ ಚಿಕ್ಕಬಾಣಾವರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದೇ ಮಕ್ಕಳು ಕ್ರೀಡಾ ಚಟುವಟಿಕೆಗಳಿಂದ ವಂಚಿತರಾಗಿದ್ದಾರೆ.

ಯಲಹಂಕ ಉತ್ತರ ತಾಲ್ಲೂಕಿನಲ್ಲಿ ಅತಿಹೆಚ್ಚು ದಾಖಲಾತಿಯನ್ನು ಹೊಂದಿರುವ ಶಾಲೆ ಎಂಬ ಹೆಗ್ಗಳಿಕೆಗೆ ಈ ವಿದ್ಯಾಲಯ ಪಾತ್ರವಾಗಿದೆ. 742 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಕೆಂಪ ಹನುಮಯ್ಯ 2014ರಲ್ಲಿ ನಿವೃತ್ತರಾದರು. ಅವರ ಸ್ಥಾನಕ್ಕೆ ಶಿಕ್ಷಣ ಇಲಾಖೆಯು ಶಿಕ್ಷಕರನ್ನು ನೇಮಕ ಮಾಡಿಲ್ಲ. 2016-17ನೇ ಸಾಲಿನಲ್ಲಿ ವಾರಕ್ಕೆ ಮೂರು ದಿನ ಬೇರೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಬಂದು ಕ್ರೀಡಾ ಚಟುವಟಿಕೆಯನ್ನು ನಡೆಸಿಕೊಡುತ್ತಿದ್ದರು. ‘ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಶಿಕ್ಷಕರನ್ನು ನೇಮಿಸಿಲ್ಲ’ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದರು.

‘ಹೋದ ವರ್ಷ ವಾರದಲ್ಲಿ ಮೂರು ದಿನ ಖೊಖೊ, ಥ್ರೋಬಾಲ್, ಕಬಡ್ಡಿ ಆಡಿಸುತ್ತಿದ್ದರು. ಓದಿನ ಜತೆ ಆಟ ಆಡುವುದು ನಮಗೆ ಇಷ್ಟ. ಈ ವರ್ಷ ಪಿ.ಟಿ ಮೇಷ್ಟ್ರೇ ಬರುತ್ತಿಲ್ಲ’ ಎಂದು ಐದನೇ ತರಗತಿಯ ವಂದನಾ ಬೇಸರದಿಂದ ಹೇಳಿದಳು.

ಯಲಹಂಕ ಕ್ಷೇತ್ರ ಶಿಕ್ಷಣಾಧಿಕಾರಿ ಕಮಲಾಕರ್ ಅವರು ಈ ಕುರಿತು ಪ್ರತಿಕ್ರಿಯಿಸಿ ‘ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ನಮ್ಮಲ್ಲಿ ಇದೆ. ಈ ಹಿಂದಿನಂತೆ ವಾರದಲ್ಲಿ ಮೂರು ದಿನಗಳ ಕಾಲ ಶಿಕ್ಷಕರನ್ನು ನಿಯೋಜಿಸಲು ಕ್ರಮ ಕೈಗೊಳ್ಳುತ್ತೇನೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !