ದೊಡ್ಡಬಳ್ಳಾಪುರ: ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

7

ದೊಡ್ಡಬಳ್ಳಾಪುರ: ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Published:
Updated:
Prajavani

ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ದಿಚಕ್ಕಿನಹಳ್ಳಿ ಗ್ರಾಮದ ಸಮೀಪ 2016ರ ಸೆಪ್ಟೆಂಬರ್ ನಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ವಿಜಯಕುಮಾರ್, ಲಕ್ಷ್ಮೀನರಸಿಂಹ ಎಂಬುವವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ನಗರದ 4ನೇ ಜಿಲ್ಲಾ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಶುಕ್ಲಾಕ್ಷಪಾಲನ್ ಆದೇಶ ನೀಡಿದ್ದಾರೆ.

ಕೊಲೆಯಾದ ಬೆಂಗಳೂರು ಉತ್ತರ ತಾಲ್ಲೂಕಿನ ಲಕ್ಕೇನಹಳ್ಳಿಯ ನಿವಾಸಿ ಚಾಂದ್ ಪಾಷ ಪತ್ನಿಗೆ ₹15 ಸಾವಿರ ಪರಿಹಾರ ನೀಡಲು ಸೂಚಿಸಲಾಗಿದೆ. ಆರೋಪಿಗಳಿಗೆ ₹10 ಸಾವಿರ ದಂಡ ವಿಧಿಸಿದ್ದಾರೆ. ಪ್ರಕರಣವನ್ನು ಆಗ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ಶಿವಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಎಂ.ಎಚ್.ಛಬ್ಬಿ ವಾದ ಮಂಡಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !