ಶನಿವಾರ, ಜೂನ್ 6, 2020
27 °C

ರಾಜ್ಯದಲ್ಲಿ ಹೂಡಿಕೆಗೆ ಜಪಾನ್‍ ಆಸಕ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೆಹಲಿಯಲ್ಲಿರುವ ಜಪಾನ್‍ನ ರಾಯಭಾರಿ ಕೆಂಜಿ ಹಿರಾಮತ್ಸು ನೇತೃತ್ವದ ನಿಯೋಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ನಗರದ ಪೆರಿಫೆರಲ್ ವರ್ತುಲ ರಸ್ತೆ, ಎಲಿವೇಟೆಡ್ ಕಾರಿಡಾರ್, ಮೆಟ್ರೊ ಯೋಜನೆಗಳ ಅನುಷ್ಠಾನ ಹಾಗೂ ನಿರ್ವಹಣೆಯ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ ಅವರು, ‘ತುಮಕೂರಿನ ವಸಂತನರಸಾಪುರದಲ್ಲಿ ಅಭಿವೃದ್ಧಿಪಡಿಸುತ್ತಿರುವ ಕೈಗಾರಿಕಾ ಪ್ರದೇಶದಲ್ಲಿ ಜಪಾನಿನ ವಿವಿಧ ಕಂಪನಿಗಳು ಹೂಡಿಕೆ ಮಾಡಲು ಉತ್ಸುಕವಾಗಿವೆ’ ಎಂದರು.

ಎಚ್‌.ಡಿ.ಕುಮಾರಸ್ವಾಮಿ, ‘ತುಮಕೂರಿನಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ 519 ಎಕರೆಯನ್ನು ಮೀಸಲಿಟ್ಟಿದ್ದು, ಇಲ್ಲಿ ತಲೆ ಎತ್ತಲಿರುವ ಈ ಕೈಗಾರಿಕಾ ನಗರ  ಚೆನ್ನೈ -ಬೆಂಗಳೂರು ಕೈಗಾರಿಕಾ ಕಾರಿಡಾರಿನ ಪ್ರಮುಖ ಭಾಗವಾಗಲಿದೆ. ಇಲ್ಲಿ ಭಾರಿ ಎಂಜಿನಿಯರಿಂಗ್ ಮತ್ತು ಯಂತ್ರೋಪಕರಣಗಳು, ಆಟೋಮೇಟಿವ್ ಮತ್ತು ಆಟೋ ಬಿಡಿಭಾಗಗಳು ಹಾಗೂ ಏರೋಸ್ಪೇಸ್ ಬಿಡಿಭಾಗಗಳನ್ನು ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಕೈಗಾರಿಕಾ ಪ್ರದೇಶದಲ್ಲಿ ಮೂಲಸೌಕರ್ಯಗಳಾದ ಕಾಂಕ್ರೀಟ್ ರಸ್ತೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ನೀರು ಸಂಸ್ಕರಣಾ ಘಟಕ, ವಿದ್ಯುತ್ ಉಪಕೇಂದ್ರ ಸ್ಥಾಪನೆ, ನೀರು ಸರಬರಾಜು ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು