ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುರುಳಿ ಚಿಕ್ಕನಹಳ್ಳಿ: ಗ್ರಾಮಸೌಧ ಉದ್ಘಾಟನೆ

Last Updated 1 ಮಾರ್ಚ್ 2019, 19:48 IST
ಅಕ್ಷರ ಗಾತ್ರ

ಹೆಸರಘಟ್ಟ: ₹ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹುರುಳಿ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸೌಧವನ್ನು ಯಲಹಂಕ ಶಾಸಕ ಎಸ್.ಅರ್.ವಿಶ್ವನಾಥ್ ಉದ್ಘಾಟಿಸಿದರು.

ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಅಭಿವೃದ್ಧಿ ಅಧಿಕಾರಿ, ಕಂಪ್ಯೂಟರ್ ಅಪರೇಟರ್‌ ಹಾಗೂ ಬಾಪೂಜಿ ಸೇವಾ ಕೇಂದ್ರದ ಪ್ರತ್ಯೇಕ ಕೊಠಡಿಗಳು ಕಟ್ಟಡದಲ್ಲಿವೆ. ಕಟ್ಟಡದ ಬಲಭಾಗದಲ್ಲಿ ಅಂಗನವಾಡಿ ಕೇಂದ್ರ ಮತ್ತು ಕುಡಿಯುವ ನೀರಿನ ಘಟಕವನ್ನೂ ನಿರ್ಮಿಸಲಾಗಿದೆ.

ಮೊದಲನೆಯ ಅಂತಸ್ತಿನಲ್ಲಿ ಸದಸ್ಯರ ಚರ್ಚಾ ಕೊಠಡಿ ಮತ್ತು ವಿಡಿಯೊ ಕಾನ್ಫರೆನ್ಸ್ ಒಳಗೊಂಡ ಸಭಾಂಗಣವನ್ನು ನಿರ್ಮಿಸಲಾಗಿದೆ. ಎರಡು ಕೊಠಡಿಗಳನ್ನು ಬಾಡಿಗೆ ನೀಡಲಾಗಿದೆ.

ಎಸ್‌.ಆರ್‌.ವಿಶ್ವನಾಥ್, ‘ಎಂಟು ಗ್ರಾಮ ಪಂಚಾಯಿತಿಗಳ ಕಟ್ಟಡಗಳ ಪೈಕಿ ಈ ಕಟ್ಟಡವು ವಿಶಿಷ್ಟವಾಗಿ ನಿರ್ಮಿಸಲಾಗಿದೆ. ಪಂಚಾಯಿತಿಗೆ ಆದಾಯವನ್ನು ತರುವ ರೀತಿಯಲ್ಲಿ ಕಟ್ಟಡ ಕಟ್ಟಲಾಗಿದೆ. ಕೆರೆಕುಂಟೆಗಳಲ್ಲಿ ನೀರು ಬತ್ತುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಮುಂದಿನ ದಿನಗಳಲ್ಲಿ ಕಾಡಬಹುದು. ನೀರಿನ ಸಮಸ್ಯೆ ಎದುರಿಸಲು ಪಂಚಾಯಿತಿಗಳು ಸಜ್ಜಾಗಬೇಕು’ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಬಿ.ಕೃಷ್ಣಯ್ಯ,‘ಜಿಲ್ಲಾ ಪಂಚಾಯಿತಿಯ ಅನುದಾನ, ಶಾಸಕರ ಅನುದಾನ ಹಾಗೂ ವಿವಿಧ ದಾನಿಗಳ ನೆರವಿನಿಂದ ಕಟ್ಟಡ ಕಟ್ಟಲಾಗಿದೆ’ ಎಂದರು.

ಸಮಾರಂಭದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಕಾರ್ಯ ನಿರ್ವಾಹಣಾಧಿಕಾರಿ ಅರ್ಚನಾ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಅಶ್ವಥ್ ರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT