ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈ ಹಿಡಿಯಲು ಹೊರಟ ಯೋಗಾ ರಮೇಶ್‌

Last Updated 22 ಮಾರ್ಚ್ 2019, 19:56 IST
ಅಕ್ಷರ ಗಾತ್ರ

ಹಾಸನ: ಕಾಂಗ್ರೆಸ್‌ ಮುಖಂಡ ಎ.ಮಂಜು ಬಿಜೆಪಿ ಸೇರ್ಪಡೆ ವಿರೋಧಿಸಿದ್ದ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಯೋಗಾ ರಮೇಶ್‌ ಈಗ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್‌ ಜತೆ ಮಾತುಕತೆ ನಡೆಸಿರುವುದು ಇದಕ್ಕೆ ಪುಷ್ಟಿ ನೀಡಿದೆ. ಶೀಘ್ರದಲ್ಲೇ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಅರಕಲಗೂಡು ತಾಲ್ಲೂಕು ಹೊನ್ನವಳ್ಳಿಯ ರಮೇಶ್‌, ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ 2013ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಎ.ಮಂಜು ಎದುರು ರಾಜಕೀಯವಾಗಿ ಸೆಣಸಾಡುತ್ತಲೇ ಬಂದಿದ್ದು, ಮಂಜು ಬಿಜೆಪಿಯಲ್ಲಿ ಇರುವವರೆಗೂ ತಮಗೆ ಭವಿಷ್ಯವಿಲ್ಲ ಎಂದುಕೊಂಡು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.

‘ಜಿಲ್ಲೆಯಲ್ಲಿ ಬಿಜೆಪಿ ಏನೇನೂ ಇಲ್ಲದೇ ಇದ್ದಾಗ ಪಕ್ಷ ಸಂಘಟನೆ ಮಾಡಿದ್ದೇನೆ. ಬೇರೆ ಪಕ್ಷದಿಂದ ಯಾರೂ ಬರಬಾರದು ಎಂದು ಹೇಳಲಾರೆ. ಜಿಲ್ಲಾ ಘಟಕದ ಅಭಿಪ್ರಾಯ ಕೇಳದೆ ಎ.ಮಂಜು ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು ತುಂಬಾ ನೋವಾಗಿದೆ’ ಎಂದು ರಮೇಶ್‌ ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT