ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಅಭ್ಯರ್ಥಿಗಳಿಂದ 13 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದವರ ವಿವರ
Last Updated 25 ಮಾರ್ಚ್ 2019, 14:53 IST
ಅಕ್ಷರ ಗಾತ್ರ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸೋಮವಾರ 8 ಅಭ್ಯರ್ಥಿಗಳು ಒಟ್ಟು 13 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಪ್ರೌಟಿಸ್ಟ್‌ ಸರ್ವ ಸಮಾಜ್‌ ಪಕ್ಷದಿಂದ ಅಭ್ಯರ್ಥಿಯಾಗಿ ಎಂ.ಕೆ.ದಯಾನಂದ 2 ನಾಮಪತ್ರ ಸಲ್ಲಿಸಿದರೆ, ಪಕ್ಷೇತ್ತರ ಅಭ್ಯರ್ಥಿಯಾಗಿ ಎಂ.ಕೆ.ಗಣೇಶ್ 2 ನಾಮಪತ್ರ ಹಾಕಿದ್ದಾರೆ. ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ 2 ನಾಮಪತ್ರ, ಶಿವಸೇನಾ ಪಕ್ಷದ ಅಭ್ಯರ್ಥಿಯಾಗಿ ಗೌತಮ್ ಪ್ರಭು 2 ನಾಮಪತ್ರ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಶೇಖರ ಹಾವಂಜೆ 2,ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಸುರೇಶ್ ಕುಂದರ್, ಪಕ್ಷೇತ್ತರ ಅಭ್ಯರ್ಥಿಯಾಗಿ ಗಣಪತಿ ಶೆಟ್ಟಿಗಾರ್, ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕಿಸ್ಟ್ ಲೆನಿನಿಸ್ಟ್‌ ಪಕ್ಷದಿಂದ ವಿಜಯ್ ಕುಮಾರ್ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಮಾರ್ಚ್ 26 ಕೊನೆಯ ದಿನವಾಗಿದ್ದು, 27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂದೆಗೆದುಕೊಳ್ಳಲು 29 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT