ಭಾನುವಾರ, ಮೇ 16, 2021
22 °C

ಸುಳ್ವಾಡಿ ಕಿಚ್ಚುಗುತ್ತು ವಿಷಪ್ರಕರಣ:ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಹನೂರು ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ವಿಷಪ್ರಸಾದ ಸೇವನೆ ಪ್ರಕರಣವನ್ನು ಶೀಘ್ರದಲ್ಲೇ ಇತ್ಯರ್ಥಿಪಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ(ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯಕ್ಕೆ ನಾಲ್ವರು ಆರೋಪಿಗಳು ಹಾಜರಾಗುತ್ತಿದ್ದಾರೆ. ಈ ಪ್ರಕರಣ ಕೂಡ ಯಾವುದೇ ರೀತಿಯ ಪರಿಣಾಮ ಬೀರದೆ ಕೆಲ ಪಟ್ಟಭದ್ರ ಹಿತಾಶಕ್ತಿಗಳಿಗೆ ಬಲಿಯಾಗುತ್ತದೆ. ವಿಷಪ್ರಸಾದ ಸೇವಿಸಿರುವ 120 ಮಂದಿ ಭಕ್ತರಲ್ಲಿ 12 ಮಂದಿ ಮೃತಪಟ್ಟರು. ಅವರ 10 ಮಂದಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಂದವರಲ್ಲಿ 50ಕ್ಕೂ ಹೆಚ್ಚು ಮಂದಿ ಇದೇ ಸಮುದಾಯದವರು.

ಪ್ರಕರಣಗಳು ಹೆಚ್ಚು ವಿಚಾರಣೆ ಇರುವುದರಿಂದ ವಿಳಂಬವಾಗಬಾರದು. ವಿಚಾರಣೆ ವಿಳಂಬವಾದರೆ ಆರೋಪಿಗಳು ತಪ್ಪಿಸಿಕೊಳ್ಳಲು ಅನುಕೂಲವಾಗುತ್ತದೆ. ಆರೋಪಿಗಳೂ ಬಲಾಢ್ಯರಾಗಿದ್ದು, ರಾಜಕೀಯ ಪ್ರಭಾವಿಗಳಾಗಿದ್ದಾರೆ ಹಾಗೂ ಮಠ ಮಾನ್ಯರ ಪ್ರಭಾವ ಬಳಸಿ ವಿಚಾರಣೆಯು ತಡವಾದರೆ ಜಾಮೀನು ಪಡೆದು ಹೊರಗೆ ಒಂದು ಸಾಕ್ಷಿಗಳನ್ನು ನಾಶಪಡಿಸುವ ಸಾಧ್ಯತೆ ಇರುವುದರಿಂದ ಪ್ರತ್ಯೇಕ ನ್ಯಾಯಾಲಯವನ್ನು ಸಾಕ್ಷಿಗಳ ಅನುಕೂಲಕ್ಕಾಗಿ ಕೊಳ್ಳೇಗಾಲದಲ್ಲೇ ತೆರೆದು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಇದೇ ವೇಳೆ ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಕೆ.ಸಿದ್ದರಾಜು ದೊಡ್ಡಿಂದುವಾಡಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣ, ಆಲೂರು ನಾಗೇಂದ್ರ, ಪ್ರಥಮ ದರ್ಜೆ ಗುತ್ತಿಗೆದಾರ ಪುಟ್ಟಸ್ವಾಮಿ, ಸುಶೀಲ ರಾಮಸಮುದ್ರ, ಬಂಗಾರಸ್ವಾಮಿ, ಗುಂಡ್ಲುಪೇಟೆ ತಾಲ್ಲೂಕು ಸಂಚಾಲಕ ಕುಮಾರ, ಡಿ.ಮಾದಯ್ಯ, ನಂಜುಂಡಯ್ಯ, ಕೃಷ್ಣಯ್ಯ, ಶಿವಯ್ಯ, ಮಣಿಯ್ಯ, ಸಿದ್ದಯ್ಯ, ಮಹದೇವಯ್ಯ ಇದ್ದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು