ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಮತಯಾಚನೆ

ಮಂಗಳವಾರ, ಏಪ್ರಿಲ್ 23, 2019
31 °C

ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಮತಯಾಚನೆ

Published:
Updated:
Prajavani

ಮುಳಗುಂದ: ಹಾವೇರಿ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಆರ್.ಪಾಟೀಲ ಅವರು ಸಮೀಪದ ಮಹಾಲಿಂಗಪೂರ, ಸೊರಟೂರ, ಯಲಿಶಿರೂರ, ಬೆಳಧಡಿ, ಬೆಳಧಡಿ ತಾಂಡೆ ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಿಳಾ ಮೀಸಲಾತಿ ಜಾರಿಗೆ ತರದ ಕೇಂದ್ರ ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ವಿರೋಧಿಯಾಗಿದೆ. ಈ ಹಿಂದೆ ಯುಪಿಎ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶ್ರಮಿಕರ, ಬಡವರ ಅಭಿವೃದ್ದಿಗೆ ನರೇಗಾ ಯೋಜನೆ ಸೇರಿದಂತೆ ಹಲವು ಜನಪರ ಯೋಜನೆಗಳ ಜಾರಿ ತಂದಿದೆ. ಮಹಿಳಾ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಸಾಕಷ್ಟು ಕಾರ್ಯ ಕ್ರಮಗಳನ್ನು ಕಾಂಗ್ರೆಸ್‌ ದೇಶಕ್ಕೆ ನೀಡಿದೆ. ಇವುಗಳನ್ನೆಲ್ಲ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯ್ತಿ ಸದಸ್ಯ ವಾಸಪ್ಪ ಕುರಡಗಿ, ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪೂರ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !