ಮೊದಲ ಹಂತದ ಚುನಾವಣಾ ತರಬೇತಿ ಪೂರ್ಣ

ಶನಿವಾರ, ಏಪ್ರಿಲ್ 20, 2019
29 °C

ಮೊದಲ ಹಂತದ ಚುನಾವಣಾ ತರಬೇತಿ ಪೂರ್ಣ

Published:
Updated:

ಬಾಗಲಕೋಟೆ: ಲೋಕಸಭಾ ಮತಕ್ಷೇತ್ರ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮತಗಟ್ಟೆ ಅಧಿಕಾರಿಗಳಾದ ಅಧ್ಯಕ್ಷಾಧಿಕಾರಿ ಹಾಗೂ ಸಹಾಯಕ ಅಧ್ಯಕ್ಷಾಧಿಕಾರಿಗಳಿಗೆ ಭಾನುವಾರ ಚುನಾವಣಾ ಪೂರ್ವ ಸಿದ್ಧತೆ ಕುರಿತು ಮೊದಲ ಹಂತದ ತರಬೇತಿ ನೀಡಲಾಯಿತು.

ಈ ತರಬೇತಿಯಲ್ಲಿ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ದಿನದಂದು, ಮತದಾನ ದಿನದಂದು ಮಾಡಬೇಕಾದ ಅಣಕು ಮತದಾನ ಮಾಡುವ ಬಗ್ಗೆ ಸೂಕ್ತ ತರಬೇತಿ ನೀಡಲಾಯಿತು. ಜೊತೆಗೆ ಮತಗಟ್ಟೆ ಅಧಿಕಾರಿಗಳಿಗೆ ಪ್ರಶ್ನಾವಳಿಗಳ ಮುಖಾಂತರ ಸಮಸ್ಯೆಗಳನ್ನು ಬಗೆಹರಿಸಲಾಯಿತು.

ಜಿಲ್ಲೆಯ 7 ಮತಕ್ಷೇತ್ರಗಳಲ್ಲಿ ನಡೆಯುತ್ತಿದ್ದ ತರಬೇತಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !