ಬಾಗಲಕೋಟೆಗೆ ಪ್ರಧಾನಿ ಮೋದಿ ಏ.18 ರಂದು

ಗುರುವಾರ , ಏಪ್ರಿಲ್ 25, 2019
21 °C

ಬಾಗಲಕೋಟೆಗೆ ಪ್ರಧಾನಿ ಮೋದಿ ಏ.18 ರಂದು

Published:
Updated:
Prajavani

ಬಾಗಲಕೋಟೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಸಭೆ ಚುನಾವಣೆಯ ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ಏಪ್ರಿಲ್ 18 ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ ಭಾನುವಾರ ಸ್ಥಳ ಪರಿಶೀಲನೆ ನಡೆಸಿದರು.

ಇಲ್ಲಿನ ರೋಟರಿ ಸರ್ಕಲ್ ಹತ್ತಿರದ ವಿಸ್ಟಾ ಹೊಟೇಲ್ ಹಿಂಬಾಗದ 20 ಎಕರೆ ಜಮೀನಿನಲ್ಲಿ ಪ್ರಚಾರ ಸಭೆ ನಡೆಸಲು ಉದ್ದೇಶಿಸಲಾಗಿದ್ದು, ಹೆಲಿಪ್ಯಾಡ್ ನಿರ್ಮಾಣ ಸೇರಿದಂತೆ ಸಾರ್ವಜನಿಕರ, ಗಣ್ಯರ ಸ್ಥಳಾವಕಾಶದ ಕುರಿತು ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ, ಶಾಸಕ ಗೋವಿಂದ ಕಾರಜೋಳ ಕಾರ್ಯಕ್ರಮದ ರೂಪುರೇಷೆ ಕುರಿತು ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಚರ್ಚೆ ನಡೆಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !