ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ ಕರ್ನಾಟಕ ವ್ಯಾಪ್ತಿಗೆ ಹರಪನಹಳ್ಳಿ: ಖಂಡನೆ

Last Updated 28 ಏಪ್ರಿಲ್ 2019, 14:39 IST
ಅಕ್ಷರ ಗಾತ್ರ

ಬೀದರ್‌: ‘ಹೈದರಾಬಾದ್‌ ಕರ್ನಾಟಕ ವ್ಯಾಪ್ತಿಗೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಸೇರಿಸಿರುವುದು ಸರಿಯಾದ ಕ್ರಮವಲ್ಲ’ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಅಶೋಕ ಮಾನೂರೆ ಖಂಡಿಸಿದ್ದಾರೆ.

‘ಭಾರತದ ಸಂವಿಧಾನಕ್ಕೆ 98ನೇ ತಿದ್ದುಪಡಿ ತಂದು ಕಲಂ 371(ಜೆ) ಅಡಿಯಲ್ಲಿ ಹೈದರಾಬಾದ್‌ ಕರ್ನಾಟಕದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರ, ಕೊಪ್ಪಳ ಹಾಗೂ ಹೆಚ್ಚುವರಿಯಾಗಿ ಬಳ್ಳಾರಿ ಜಿಲ್ಲೆಗೆ ವಿಶೇಷ ಸೌಲಭ್ಯ ಒದಗಿಸಲಾಗಿದೆ’ ಎಂದು ಹೇಳಿದ್ದಾರೆ.

‘ಹೈದರಾಬಾದ್‌ ಕರ್ನಾಟಕದ ವ್ಯಾಪ್ತಿಗೆ ಯಾವುದೇ ಒಂದು ಊರನ್ನು ಸೇರಿಸುವ ಅಥವಾ ಕೈಬಿಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ರಾಜ್ಯದ ಅನೇಕ ಇಲಾಖೆಗಳಲ್ಲಿ ನೇಮಕಾತಿ ನಡೆದರೂ ಸರ್ಕಾರ ಮೀಸಲಾತಿ ಸೌಲಭ್ಯ ಕಲ್ಪಿಸಿಲ್ಲ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಿದೆ’ ಎಂದು ದೂರಿದ್ದಾರೆ.

‘ಶೈಕ್ಷಣಿಕವಾಗಿ ಹಿಂದುಳಿದಿರುವ ಕಾರಣ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಸಂವಿಧಾನಬದ್ಧವಾಗಿ ಮೀಸಲಾತಿ ಕಲ್ಪಿಸಲಾಗಿದೆ. ಆದರೆ ಅದು ಸಮರ್ಪಕವಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ. ಈ ಭಾಗದ ಜನರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT