ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದತ್ತಗಿರಿ ಶಾಲೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Last Updated 3 ಮೇ 2019, 15:02 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಬಸವನಗರ ಕಾಲೊನಿಯಲ್ಲಿ ಇರುವ ದತ್ತಗಿರಿ ಮಹಾರಾಜ್‌ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಶುಕ್ರವಾರ ಸನ್ಮಾನಿಸಲಾಯಿತು.

ದತ್ತಗಿರಿ ಮಹಾರಾಜ್ ಶಿಕ್ಷಣ ಸಂಸ್ಥೆಯು ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ. ಮಕ್ಕಳಲ್ಲಿ ನೈತಿಕ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಂಗಯ್ಯ ರೇಜಂತಲ್ ಹೇಳಿದರು.

ಬರ್ದಿಪುರ ಆಶ್ರಮದ ಅವಧೂತಗಿರಿ ಮಹಾರಾಜ, ಡಾ. ಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆಯ ಗೌರವಾಧ್ಯಕ್ಷ ರಮೇಶಕುಮಾರ ಪಾಂಡೆ, ಉಪಾಧ್ಯಕ್ಷ ಮಲ್ಲಿಕಾರ್ಜುನ ಹತ್ತಿ, ಕಾರ್ಯದರ್ಶಿ ಶಿವರಾಜ ಪಾಟೀಲ, ಜಂಟಿ ಕಾರ್ಯದರ್ಶಿ ರಮೇಶ ಜಿ. ದುಕಾನದಾರ್, ಖಜಾಂಚಿ ಪ್ರಭಾಕರ ಮೈಲಾಪುರೆ, ಆಡಳಿತ ಮಂಡಳಿ ಸದಸ್ಯರಾದ ಅನಿಲಕುಮಾರ ಯರಮಲ್ಲಿ, ರವಿಶಂಕರ ಮಲಸಾ, ಬಸವರಾಜ ದೇಗಲಮಡಿ, ಕನ್ನಡ ಮಾಧ್ಯಮ ಪ್ರಾಚಾರ್ಯೆ ಜಯದೇವಿ ಯದಲಾಪುರೆ, ಆಂಗ್ಲ ಮಾಧ್ಯಮ ಪ್ರಾಚಾರ್ಯೆ ಮಹಾದೇವಿ ಬೀದೆ, ರೇವಣಸಿದ್ದ ಉಪಸ್ಥಿತರಿದ್ದರು.

ಸಂಪತಕುಮಾರ ಡಿ. ನಿರೂಪಿಸಿದರು. ಧನರಾಜ ಖಾಜಾಪುರೆ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT