ಕಾನ್‌ಸ್ಟೆಬಲ್ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ
ಬೆಂಗಳೂರು: ಕಾನ್‌ಸ್ಟೆಬಲ್ ತಲೆಗೆ ಹೆಲ್ಮೆಟ್‌ನಿಂದ ಹೊಡೆದು ಹಲ್ಲೆ ಮಾಡಿದ್ದ ಆರೋಪದಡಿ ವಿಜಯ್‌ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
‘ಬನಶಂಕರಿ ನಿವಾಸಿಯಾದ ವಿಜಯ್‌ಕುಮಾರ್, ಬಸವನಗುಡಿ ಸಂಚಾರ ಠಾಣೆ ಕಾನ್‌ಸ್ಟೆಬಲ್ ಸುರೇಶ್ ಅವರ ಮೇಲೆ ಶುಕ್ರವಾರ ರಾತ್ರಿ ಹಲ್ಲೆ ಮಾಡಿದ್ದ’ ಎಂದು ಪೊಲೀಸರು ಹೇಳಿದರು.
‘ರಾತ್ರಿ 9.45ರ ಸುಮಾರಿಗೆ ವಿಜಯ್‌ಕುಮಾರ್, ಲಾಲ್‌ಬಾಗ್ ಪಶ್ಚಿಮ ಗೇಟ್ ಬಳಿಯ ಏಕಮುಖ ರಸ್ತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಎದುರಿಗೆ ಬಂದ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ವಿಜಯ್ ಕೆಳಗೆ ಬಿದ್ದಿದ್ದರು. ಘಟನಾ ಸ್ಥಳಕ್ಕೆ ಸಮೀಪದಲ್ಲಿ ಕರ್ತವ್ಯದಲ್ಲಿದ್ದ ಸುರೇಶ್, ರಕ್ಷಣೆಗೆ ಹೋಗಿದ್ದರು. ಅದೇ ವೇಳೆಯೇ ಆರೋಪಿ ಹಲ್ಲೆ ಮಾಡಿದ್ದ’ ಎಂದು ವಿವರಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.