ಶುಕ್ರವಾರ, ನವೆಂಬರ್ 15, 2019
23 °C

ಅಪಘಾತ; ಇಬ್ಬರ ಸಾವು

Published:
Updated:

ಬೆಂಗಳೂರು: ನಗರದ ಎರಡು ಕಡೆ ಗಳಲ್ಲಿ ಗುರುವಾರ ರಾತ್ರಿ ಸಂಭವಿಸಿದ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಯಶವಂತಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸವಾರ ಸುಹೇಲ್ ಪಾಷಾ (20) ಎಂಬುವರು ಮೃತಪಟ್ಟಿದ್ದಾರೆ. ಅವರ ಸ್ನೇಹಿತರಾದ ಇಮ್ರಾನ್ ಹಾಗೂ ಸಿರಾಜ್ ತೀವ್ರ ಗಾಯಗೊಂಡಿದ್ದಾರೆ.

‘ಮೊಬೈಲ್ ನೆಟ್‌ವರ್ಕ್‌ ಟವರ್‌ ದುರಸ್ತಿ ಕೆಲಸ ಮಾಡುತ್ತಿದ್ದ ಲಗ್ಗೆರೆಯ ಸುಹೇಲ್ ಹಾಗೂ ಸ್ನೇಹಿತರು, ಒಂದೇ ದ್ವಿಚಕ್ರವಾಹನದಲ್ಲಿ ಹೊರಟಿದ್ದರು. ಹೆಲ್ಮೆಟ್ ಸಹ ಧರಿಸಿರಲಿಲ್ಲ. ರಾಯ ಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆ ದಿತ್ತು’ ಎಂದು ಪೊಲೀಸರು ಹೇಳಿದರು.

ಔಷಧ ಅಂಗಡಿ ಮಾಲೀಕ ಸಾವು: ಬನಶಂಕರಿ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಉರುಳಿ ಬಿದ್ದಿದ್ದರಿಂದ ಸವಾರ ಮಲ್ಲಿಕಾರ್ಜುನ (66) ಎಂಬುವರು ಮೃತಪಟ್ಟಿದ್ದಾರೆ.

‘ಔಷಧ ಅಂಗಡಿ ಮಾಲೀಕರಾಗಿದ್ದ ಅವರು ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟಿದ್ದರು. ಅದೇ ವೇಳೆ ವಾಹನ ಉರುಳಿಬಿದ್ದಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ನಿಮ್ಹಾನ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದರು’ ಎಂದು ಪೊಲೀಸರು ಹೇಳಿದರು.

ಪ್ರತಿಕ್ರಿಯಿಸಿ (+)