ಶುಕ್ರವಾರ, ನವೆಂಬರ್ 22, 2019
19 °C

ಕಾಲ್ಪನಿಕ ವೇತನ, ಪಿಂಚಣಿ: ಹೊರಟ್ಟಿ ವರದಿ ಜಾರಿಗೆ ಒತ್ತಾಯ

Published:
Updated:

ಬೆಂಗಳೂರು: ಕಾಲ್ಪನಿಕ ವೇತನ ಹಾಗೂ ಪಿಂಚಣಿ ನೀಡುವ ಕುರಿತಂತೆ ಬಸವರಾಜ ಹೊರಟ್ಟಿ ನೇತೃತ್ವದ ಸಮಿತಿ ನೀಡಿದ್ದ ಮರು ಪರಿಶೀಲನಾ ವರದಿಯನ್ನು ಜಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟವು ಸರ್ಕಾರವನ್ನು ಆಗ್ರಹಿಸಿದೆ.

ಈ ಕುರಿತು ಚರ್ಚಿಸಲು ದಾವಣಗೆರೆಯ ಹಿರೇಕಲ್ಮಠದ ಹೊನ್ನಾಳಿಯಲ್ಲಿ ಭಾನುವಾರ ಬೆಳಿಗ್ಗೆ 9ಕ್ಕೆ ಅನುದಾನಿತ ಶಾಲಾ ಕಾಲೇಜುಗಳ ಸಂಘಟನೆಯ ಪದಾಧಿಕಾರಿಗಳ ಸಭೆ ಕರೆದಿದೆ.

ಸಭೆಯಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆ ಹಾಗೂ ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಿ, ಬಳಿಕ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯರನ್ನು ಭೇಟಿ ಮಾಡಿ, ವರದಿ ಜಾರಿಗೆ ಒತ್ತಾಯಿಸಲಾಗುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಎಂ.ಪಿ. ಕರಿಬಸಪ್ಪ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)