ಮಂಗಳವಾರ, ಅಕ್ಟೋಬರ್ 22, 2019
25 °C
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊ

ಕಳುವಾಗಿದ್ದ ಬೈಕ್ ನೀಡಲು ₹ 5,000 ಲಂಚ?

Published:
Updated:

ಬೆಂಗಳೂರು: ಕಳುವಾಗಿದ್ದ ಬೈಕ್‌ನ್ನು ಮಾಲೀಕರಿಗೆ ವಾಪಸು ನೀಡಲು ನಗರದ ಪೊಲೀಸರೊಬ್ಬರು ₹ 5,000 ಲಂಚ ಪಡೆದಿದ್ದಾರೆ ಎನ್ನಲಾಗಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಶ್ಚಿಮ ವಿಭಾಗ ವ್ಯಾಪ್ತಿಯ ಠಾಣೆಗೆ ಸೇರಿದ ಪೊಲೀಸ್, ಹಣ ಪಡೆದು ಜೇಬಿಗೆ ಹಾಕಿಕೊಳ್ಳುವ ದೃಶ್ಯ ವಿಡಿಯೊದಲ್ಲಿದೆ.

ಆ ವಿಡಿಯೊವನ್ನು ಗಗನ್ ಬಪ್ಪಿ ಎಂಬುವರು, ನಗರ ‍ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ಟ್ವಿಟರ್‌ ಖಾತೆಗೆ ಟ್ಯಾಗ್ ಮಾಡಿದ್ದಾರೆ. ‘ಕಳುವಾಗಿದ್ದ ನನ್ನ ಸಹೋದರನ ಬೈಕ್‌ ಅನ್ನು ಪತ್ತೆ ಮಾಡಿದ್ದ ಪೊಲೀಸರು, ಅದನ್ನು ವಾಪಸು ನೀಡಲು ₹5,000 ಲಂಚ ಪಡೆದಿದ್ದಾರೆ. ಈ ಬಗ್ಗೆ ಏನು ಹೇಳುತ್ತೀರಾ’ ಎಂದು ಗಗನ್ ಪ್ರಶ್ನಿಸಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿರುವ ಸಾರ್ವಜನಿಕರು, ‘ಹಲವು ಠಾಣೆಗಳಲ್ಲಿ ಇದೇ ಸ್ಥಿತಿ ಇದೆ. ಕೆಲವರ ವರ್ತನೆಯಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಹಣ ಪಡೆದ ಪೊಲೀಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಕಮಿಷನರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)