ಬುಧವಾರ, ಜನವರಿ 29, 2020
24 °C
ಬೈಕ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಅಪಘಾತ

ಅಪಘಾತ: ಇಬ್ಬರು ಪ್ರವಾಸಿಗರ ಸಾವು

ಪ್ರಜಾವಾಣ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ರಾಷ್ಟ್ರೀಯ ಹೆದ್ದಾರಿ 275ರ ಕೊಯಿನಾಡು – ದೇವರಕೊಲ್ಲಿ ಎಂಬಲ್ಲಿ ಶನಿವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಇಬ್ಬರು ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳ ಅರ್ನಾಬ್‌ (30) ಹಾಗೂ ಬಿಹಾರದ ನವೀನ್ ಕುಮಾರ್ (29) ಮೃತಪಟ್ಟವರು.

ಬಸ್‌ ಮುಂಭಾಗಕ್ಕೆ ಬೈಕ್‌ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇಬ್ಬರು ಬೆಂಗಳೂರಿನ ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲಸ ಮಾಡುತ್ತಿದ್ದರು. ಮೂವರು ಕೊಡಗು ಪ್ರವಾಸಕ್ಕೆ ಬಂದಿದ್ದರು. ಒಬ್ಬ ಒಂದು ಬೈಕ್‌ನಲ್ಲಿ, ಮತ್ತಿಬ್ಬರು ಮತ್ತೊಂದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್, ಡಿವೈಎಸ್‌ಪಿ ದಿನೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು