ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲೆ ಧರಣಿ ಸಾವಿನ ಪ್ರಕರಣ: ಆರೋಪಿಗೆ ಜಾಮೀನು

Last Updated 3 ಜೂನ್ 2019, 20:41 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಯುವ ವಕೀಲೆ ಎಸ್‌. ಧರಣಿ ಸಾವಿನ ಪ್ರಕರಣದ ಆರೋಪಿ ಎ.ನಾರಾಯಣಪುರ ವಾರ್ಡ್‌ನ ಪಾಲಿಕೆ ಸದಸ್ಯ ವಿ.ಸುರೇಶ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಈ ಕುರಿತಂತೆ ಸುರೇಶ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ಆರೋಪಿ ಅರ್ಜಿದಾರರು ₹ 5 ಲಕ್ಷ ಬಾಂಡ್ ಮತ್ತು ಇಬ್ಬರ ಭದ್ರತೆ ನೀಡಬೇಕು. ಸಾಕ್ಷ್ಯ ನಾಶ ಮಾಡಬಾರದು’ ಎಂಬ ಷರತ್ತು ವಿಧಿಸಲಾಗಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್‌.ಪೊನ್ನಣ್ಣ ವಾದ ಮಂಡಿಸಿದರು.

ಪ್ರಕರಣವೇನು?: ‘ವಕೀಲೆ ಧರಣಿ ಅವರು 2018ರ ಡಿಸೆಂಬರ್‌ 31ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮಹದೇವಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT