ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಏರೋ ಇಂಡಿಯಾ’ ಅಗ್ನಿ ದುರಂತ ಆಯೋಗ ರಚಿಸಲು ಕೋರಿಕೆ

Last Updated 1 ಅಕ್ಟೋಬರ್ 2019, 19:56 IST
ಅಕ್ಷರ ಗಾತ್ರ

ಬೆಂಗಳೂರು: ‘ಯಲಹಂಕ ವಾಯು ನೆಲೆಯಲ್ಲಿನ 2019ರ ಫೆಬ್ರುವರಿ 23ರಂದು ಅಂತರರಾಷ್ಟ್ರೀಯ ಏರ್‍ ಶೋ ವೇಳೆ ಕಾರುಗಳ ಪಾರ್ಕಿಂಗ್‌ ಪ್ರದೇಶದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತ ವಿಚಾರಣೆಗೆ ಏಕವ್ಯಕ್ತಿ ನ್ಯಾಯಾಂಗ ಆಯೋಗ ರಚನೆಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ನಿವೃತ್ತ ವಿಂಗ್ ಕಮಾಂಡರ್‌ ಜಿ.ವಿ. ಅತ್ರಿ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಈ ಅರ್ಜಿಯನ್ನು ರಜಾಕಾಲದ ವಿಭಾಗೀಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಚ್‌.ಟಿ.ನರೇಂದ್ರ ಪ್ರಸಾದ್ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್.ಕಿಣಗಿ ಮಂಗಳವಾರ ವಿಚಾರಣೆ ನಡೆಸಿದರು.

ಪ್ರತಿವಾದಿಗಳಾದ ಎಚ್‌ಎಎಲ್‌ ಕಾರ್ಯನಿರ್ವಾಹಕ ನಿರ್ದೇಶಕರು, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ಹಾಗೂ ಅಗ್ನಿ ಶಾಮಕ ಸೇವೆಗಳು ವಿಭಾಗದ ಪೊಲೀಸ್‌ ಆಯುಕ್ತರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT