ಮಂಗಳವಾರ, ಏಪ್ರಿಲ್ 13, 2021
23 °C
ಅಧಿವೇಶನದಲ್ಲಿ ಬಜೆಟ್‌ಗೆ ಇನ್ನೂ ಸಿಕ್ಕಿಲ್ಲ ಅನುಮತಿ

ಅನುದಾನಿತ ಕಾಲೇಜು: ಜೂನ್‌ ವೇತನ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಬಜೆಟ್‌ಗೆ ಅನುಮೋದನೆ ಸಿಗದೆ ಇರುವುದರ ನೇರ ಪರಿಣಾಮ ಗೋಚರವಾಗಿದ್ದು, ಅನುದಾನಿತ ಪದವಿಪೂರ್ವ ಕಾಲೇಜುಗಳ ಸಿಬ್ಬಂದಿಗೆ ಜೂನ್‌ ತಿಂಗಳ ಸಂಬಳವೇ ಸಿಕ್ಕಿಲ್ಲ.

‘ಆರ್ಥಿಕ ಇಲಾಖೆಯಿಂದ 2ನೇ ತ್ರೈಮಾಸಿಕ ಕಂತಿನ ಹಣ ಬಿಡುಗಡೆ ಆಗದ ಕಾರಣ ಈ ತೊಂದರೆ ಉಂಟಾಗಿದೆ. ಅಧಿವೇಶನದಲ್ಲಿ ಬಜೆಟ್‌ಗೆ ಅನುಮತಿ ಸಿಕ್ಕಿದ ನಂತರ ಹಣ ಬಿಡುಗಡೆ ಮಾಡುತ್ತೇವೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ’ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಬಸಪ್ಪ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು