ಆ್ಯಂಬಿಡೆಂಟ್‌ ವಂಚನೆ: ಹಣ ಹಿಂದಿರುಗಿಸಲು ಕೋರಿ ಪಿಐಎಲ್‌

7

ಆ್ಯಂಬಿಡೆಂಟ್‌ ವಂಚನೆ: ಹಣ ಹಿಂದಿರುಗಿಸಲು ಕೋರಿ ಪಿಐಎಲ್‌

Published:
Updated:
Prajavani

ಬೆಂಗಳೂರು: ‘ಆ್ಯಂಬಿಡೆಂಟ್ ಕಂಪನಿಯ ವಂಚನೆ ಪ್ರಕರಣದಲ್ಲಿ ಆರೋಪಿಗಳಿಂದ ಜಪ್ತಿ ಮಾಡಿರುವ ಹಣವನ್ನು ಸಂಬಂಧಪಟ್ಟ ಠೇವಣಿದಾರರಿಗೆ ಹಿಂದಿರುಗಿಸಲು ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೆ ನಿರ್ದೇಶನ ನೀಡಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ವಿನೋಬಾನಗರ ನಿವಾಸಿ ಶಫೀವುಲ್ಲಾ ಖಾನ್ ಸೇರಿದಂತೆ 25 ಜನರು ಈ ಅರ್ಜಿ ಸಲ್ಲಿಸಿದ್ದು, ಇದು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

‘ದಿ.ಆ್ಯಂಬಿಡೆಂಟ್ ಮಾರ್ಕೆಟಿಂಗ್ ಪ್ರೈ. ಲಿಮಿಟೆಡ್ ಕಂಪನಿ, ಅದರ ಪ್ರವರ್ತಕರು, ಏಜೆಂಟರು, ಸಂಚಾಲಕರು ಮತ್ತು ಕಂಪನಿಗೆ ಸಂಬಂಧಿಸಿದವರಿಂದ 30 ಸಾವಿರಕ್ಕೂ ಹೆಚ್ಚು ಕುಟುಂಬಗಳು ಮೋಸ ಹೋಗಿವೆ. ಈ ಪ್ರಕರಣದ ತನಿಖೆ ವಿಳಂಬವಾಗುವಂತೆ ಮಾಡಲು ಉದ್ದೇಶಪೂರ್ವಕವಾಗಿ ಕಂಪನಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

‘ಪೊಲೀಸರು ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ಪ್ರಕರಣದ ತನಿಖೆಯನ್ನು ತ್ವರಿತವಾಗಿ ಮುಗಿಸುವಂತೆ ರಾಜ್ಯ ಗೃಹ ಇಲಾಖೆಗೆ ನಿರ್ದೇಶಿಸಬೇಕು’ ಎಂದು ಕೋರಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !