ಶನಿವಾರ, ಜನವರಿ 25, 2020
25 °C

ಇದೇ 26ರಿಂದ ಅಂಗನವಾಡಿ ನೌಕರರ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯಅಂಗನವಾಡಿ ಕಾರ್ಯಕರ್ತೆಯರುಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಇದೇ 26 ಮತ್ತು27ಕ್ಕೆ ಧರಣಿ ಹಮ್ಮಿಕೊಂಡಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ಮಾತನಾಡಿ, ‘26ರಂದು ಬೆಳಿಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ
ದಿಂದ ಸ್ವಾಂತಂತ್ರ್ಯಉದ್ಯಾನವದವರೆಗೆ ಪ್ರತಿಭಟನಾ ರ‍್ಯಾಲಿಯ ಮೂಲಕ ತೆರಳಿ, ಅಹೋರಾತ್ರಿ ಧರಣಿ ನಡೆಸಲಾಗುವುದು. ಅಂಗನವಾಡಿಗಳಿಗೆ ಮಾರಕವಾಗಿರುವ ನೂತನ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು. ಸೇವಾ ಹಿರಿತನವನ್ನು ಪರಿಗಣಿಸುವ ಮೂಲಕ ವರ್ಷಕ್ಕೆ ₹ 200 ಭತ್ಯೆ ಹೆಚ್ಚಳ, ವೈದ್ಯಕೀಯ ಸೌಲಭ್ಯ, ರಜೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿಸಲ್ಲಿಸಲಾಗುವುದು. ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು