ಭಾನುವಾರ, ಸೆಪ್ಟೆಂಬರ್ 26, 2021
25 °C

ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ; ಮಹಿಳೆ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹೊರರಾಜ್ಯದ ಯುವತಿಯರನ್ನು ಬಳಸಿಕೊಂಡು ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಧುರಿ ಎಂಬಾಕೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಕೋರಮಂಗಲ 5ನೇ ಬ್ಲಾಕ್‌ನ ಕೆಎಚ್‌ಬಿ ಕಾಲೊನಿಯಲ್ಲಿ ‘ಸುಖಿ ಸ್ಪಾ ಆ್ಯಂಡ್ ಸಲೂನ್ ಯುನಿಸೆಕ್ಸ್’ ಪಾರ್ಲರ್ ನಡೆಸುತ್ತಿದ್ದ ಮಾಧುರಿ,  ಹ್ಯಾಪಿ ಎಂಡಿಂಗ್, ಸ್ಯಾಂಡ್ ವಿಚ್ ಹಾಗೂ ಬಾಡಿ ಟು ಬಾಡಿ ಮಸಾಜ್‌ಗಳ ಹೆಸರಿನಲ್ಲಿ ಲೈಂಗಿಕ ಚಟುವಟಿಕೆ ನಡೆಸುತ್ತಿದ್ದಳು. ಅಲ್ಲದೇ, ಪರಿಚಿತ ಗಿರಾಕಿಗಳನ್ನು ಕರೆಸಿಕೊಂಡು ವೇಶ್ಯಾವಾಟಿಕೆಯನ್ನೂ ನಡೆಸುತ್ತಿದ್ದರು’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಈ ದಂಧೆ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ ಶುಕ್ರವಾರ ಸಂಜೆ ಸ್ಪಾ ಮೇಲೆ ದಾಳಿ ಮಾಡಿದೆವು. ಅಲ್ಲಿದ್ದ ಯುವತಿಯರಿಗೆ ಬುದ್ಧಿಮಾತು ಹೇಳಿ, ಅವರವರ ರಾಜ್ಯಗಳಿಗೆ ಕಳಿಸುವ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು