ಎಫ್‌ಐಆರ್ ರದ್ದುಪಡಿಸಲು ಶಾಸಕ ಲಿಂಬಾವಳಿ ಮನವಿ

7

ಎಫ್‌ಐಆರ್ ರದ್ದುಪಡಿಸಲು ಶಾಸಕ ಲಿಂಬಾವಳಿ ಮನವಿ

Published:
Updated:

ಬೆಂಗಳೂರು: ‘ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಬೀಸನಹಳ್ಳಿಯ ಖಾಸಗಿ ನರ್ಸರಿ ಶಾಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ಶಾಸಕ ಅರವಿಂದ ಲಿಂಬಾವಳಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

‘ನನ್ನ ವಿರುದ್ಧದ ವಿಚಾರಣೆ ಕಾನೂನುಬಾಹಿರವಾಗಿದೆ. ಆದ್ದರಿಂದ ಎಫ್‌ಐಆರ್ ರದ್ದುಗೊಳಿಸಬೇಕು. ಅಂತೆಯೇ ವಿಚಾರಣೆಗೆ ತಡೆ ನೀಡಬೇಕು’ ಎಂದು ಅವರು ಕೋರಿದ್ದಾರೆ.

ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

‘ಘಟನೆ ಖಂಡಿಸಿ 2017ರ ಫೆಬ್ರುವರಿ 18ರಂದು ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಸಾರ್ವಜನಿಕ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ರಸ್ತೆ ತಡೆ ನಡೆಸಿ ಸಂಚಾರ ದಟ್ಟಣೆ ಉಂಟು ಮಾಡಿ ಸಾರ್ವಜನಿಕ ಜನಜೀವನಕ್ಕೆ ತೊಂದರೆ ನೀಡಲಾಗಿದೆ’ ಎಂದು ಆರೋಪಿಸಿ ಎಚ್‌ಎಎಲ್ ಠಾಣಾ ಪೊಲೀಸರು ಅರವಿಂದ ಲಿಂಬಾವಳಿ ಸೇರಿ 24 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಇದರನ್ವಯ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !