ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಕ್ರೀದ್ ಆಚರಣೆಗೆ ಪೊಲೀಸ್‌ ರಕ್ಷಣೆ ನೀಡಿ’

Last Updated 10 ಆಗಸ್ಟ್ 2019, 19:38 IST
ಅಕ್ಷರ ಗಾತ್ರ

ಬೆಂಗಳೂರು: ‘ಬಕ್ರೀದ್ ಹಬ್ಬ ಆಚರಣೆಯ ಸಮಯದಲ್ಲಿ ಮುಸ್ಲಿಮರಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡಬೇಕು ಎಂದು ಬಹುಜನ ಅಂಬೇಡ್ಕರ್ ಸಂಘ ಒತ್ತಾಯಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷೆ ಎನ್.ಸಿ. ಜ್ಯೋತಿ, ‘ಮುಸ್ಲಿಮರು ಬಕ್ರೀದ್ ಸಂದರ್ಭದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಬಲಿದಾನ ಕಾರ್ಯಕ್ರಮ ನಡೆಸುತ್ತಾರೆ. 1,400 ವರ್ಷಗಳಿಂದಲೂ ಆಚರಿಸಿಕೊಂಡು ಬಂದಿರುವ ಇಂತಹ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುವ ಪ್ರಯತ್ನಗಳು ಈಚೆಗೆ ನಡೆಯುತ್ತಿವೆ. ಮುಸಲ್ಮಾನರ ಬಕ್ರೀದ್ ಹಬ್ಬಕ್ಕೆ ಹಿಂದೂ ಸಂಘಟನೆಗಳು ಅಡಚಣೆ ಮಾಡುವುದಕ್ಕೆ ಅವಕಾಶ ನೀಡಬಾರದು’ ಎಂದರು.

ಸಂಘಟನೆಯ ಮಹಮ್ಮದ್ ಸೈಫುಲ್ಲಾ, ‘ಬಕ್ರೀದ್ ಹಬ್ಬವನ್ನು ಆಚರಿಸಲು ಎಲ್ಲಾ ಸಂಘಟನೆಗಳು ಸಹಕಾರ ನೀಡಬೇಕು. ನೆರೆ ಹಾವಳಿಗೆ ತುತ್ತಾಗಿರುವ ಉತ್ತರ ಕರ್ನಾಟಕದ ಸಂತ್ರಸ್ತರಿಗೆ ಜಾತಿ, ಭೇದ ಬಿಟ್ಟು ನೆರವಿನ ಸಹಾಯ ಹಸ್ತ ಚಾಚೋಣ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT