ಶುಕ್ರವಾರ, ಫೆಬ್ರವರಿ 26, 2021
30 °C
ಪುರಭವನ –ಮೈಸೂರು ರಸ್ತೆ ಮಾರ್ಗ

ಬಾಲಗಂಗಾಧರನಾಥ ಮೇಲ್ಸೇತುವೆ: ಇಂದಿನಿಂದ ವಾಹನ ಸಂಚಾರಕ್ಕೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಲಗಂಗಾಧರನಾಥ ಮೇಲ್ಸೇತುವೆ ರಸ್ತೆಯ ಒಂದು ಪಾರ್ಶ್ವದಲ್ಲಿ ಶುಕ್ರವಾರ ಸಂಜೆಯಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಪಾಲಿಕೆ ಮುಂದಾಗಿದೆ.

‘ಮೇಲ್ಸೇತುವೆಯಲ್ಲಿ ಒಂದು ಪಾರ್ಶ್ವದ ರಸ್ತೆಯ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದೆ. ಪುರಭವನ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಚಲಿಸುವ ವಾಹನಗಳು ಈ ಮೇಲ್ಸೇತುವೆ ಮೇಲೆ ಸಂಚರಿಸುವುದಕ್ಕೆ ಶುಕ್ರವಾರ ಸಂಜೆ ಬಳಿಕ ಅವಕಾಶ ಮಾಡಿಕೊಡುತ್ತೇವೆ’ ಎಂದು ಪಾಲಿಕೆ ಮುಖ್ಯ ಎಂಜಿನಿಯರ್‌ (ಯೋಜನೆ) ಕೆ.ಟಿ.ನಾಗರಾಜ್‌ ತಿಳಿಸಿದ್ದಾರೆ. 

2018ರ ಡಿಸೆಂಬರ್‌ ಅಂತ್ಯದಲ್ಲಿ ಈ ಮೇಲ್ಸೇತುವೆಯ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಕಾಮಗಾರಿಯ ಸಂದರ್ಭದಲ್ಲಿ ಪುರಭವನದಿಂದ ಮೈಸೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಕೆ.ಆರ್‌. ಮಾರುಕಟ್ಟೆ ರಸ್ತೆ ಮೂಲಕ ಸಾಗುತ್ತಿದ್ದವು. 

ಮೈಸೂರು ರಸ್ತೆ ಕಡೆಯಿಂದ ಪುರಭವನದ ಕಡೆಗಿನ ರಸ್ತೆಯ ಡಾಂಬರೀಕರಣ ನಡೆಯುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗುತ್ತಿದೆ. ಈ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು