ಬಂದ್: ಕಲಬುರ್ಗಿ ಜಿಲ್ಲೆಯ ಶಾಲಾ–ಕಾಲೇಜುಗಳಿಗೆ ರಜೆ

7

ಬಂದ್: ಕಲಬುರ್ಗಿ ಜಿಲ್ಲೆಯ ಶಾಲಾ–ಕಾಲೇಜುಗಳಿಗೆ ರಜೆ

Published:
Updated:
Deccan Herald

ಕಲಬುರ್ಗಿ: ತೈಲ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳು ಸೆ.10ರಂದು ಕರೆ ನೀಡಿರುವ ‘ಭಾರತ ಬಂದ್’ಗೆ ಕಾಂಗ್ರೆಸ್, ಜೆಡಿಎಸ್ ಜಿಲ್ಲಾ ಸಮಿತಿಗಳು ಹಾಗೂ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.

‘ಸ್ವಯಂ ಪ್ರೇರಿತ ಬಂದ್‌ಗೆ ಉದ್ದಿಮೆದಾರರು, ವ್ಯಾಪಾರಿಗಳು, ಸಾರ್ವಜನಿಕರು ಸಹಕರಿಸಬೇಕು. ಎಲ್ಲಾ ಸಂಘ ಸಂಸ್ಥೆಗಳು ಸ್ವ-ಇಚ್ಛೆಯಿಂದ ಬಂದ್‌ನಲ್ಲಿ ಪಾಲ್ಗೊಳ್ಳಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಮನವಿ ಮಾಡಿದ್ದಾರೆ.

‘ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು’ ಎಂದು ಜೆಡಿಎಸ್ ಜಿಲ್ಲಾ ಘಟದಕ ಪ್ರಧಾನ ಕಾರ್ಯದರ್ಶಿ ದೇವೇಗೌಡ ತೆಲ್ಲೂರ ತಿಳಿಸಿದ್ದಾರೆ.

ಸಿಪಿಐಎಂ, ಸಿಪಿಐ, ಎಸ್‌ಯುಸಿಐ, ಕೆಎಸ್‌ಆರ್‌ಟಿಸಿ ಸ್ಟಾಫ್ ಮತ್ತು ವರ್ಕರ್ಸ್‌ ಫೆಡರೇಷನ್‌, ಎಐಟಿಯುಸಿ, ದಲಿತ ಸಂಘಟನೆಗಳು, ಜಿಲ್ಲಾ ಲಾರಿ ಮಾಲೀಕರ ಸಂಘ ಹಾಗೂ ವಿವಿಧ ಸಂಘಟನೆಗಳು ಬಂದ್ ಆಚರಿಸುತ್ತಿವೆ.

‘ಎನ್‌ಇಕೆಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸುತ್ತಿರುವುದರಿಂದ ಶಾಲಾ–ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಅಲ್ಲದೆ ಶಾಂತಿ, ಸುವ್ಯವಸ್ಥೆ ಕಾಪಾಡಲು ಶಾಲಾ–ಕಾಲೇಜುಗಳಿಗೆ ಸೆ.10ರಂದು ಒಂದು ದಿನ ರಜೆ ಘೋಷಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಬಂದ್ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕೆಎಸ್‌ಆರ್‌ಪಿ, ಹೋಮ್‌ಗಾರ್ಡ್ಸ್‌, ಪೊಲೀಸ್ ಅಧಿಕಾರಿಗಳು ಸೇರಿದಂತೆ 2 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಒತ್ತಾಯ ಪೂರ್ವಕವಾಗಿ ಅಂಗಡಿ–ಮುಂಗಟ್ಟುಗಳನ್ನು ಬಂದ್ ಮಾಡಿಸಲು ಮುಂದಾದರೆ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !