ಏ.22 ಬೆಂಗಳೂರು ವಿವಿ ಘಟಿಕೋತ್ಸವ

ಮಂಗಳವಾರ, ಏಪ್ರಿಲ್ 23, 2019
32 °C

ಏ.22 ಬೆಂಗಳೂರು ವಿವಿ ಘಟಿಕೋತ್ಸವ

Published:
Updated:

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 54 ನೇ ಘಟಿಕೋತ್ಸವ ಏಪ್ರಿಲ್‌ 22 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಘಟಿಕೋತ್ಸವ ಭಾಷಣ ಮಾಡುವರು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ದೂರ ಶಿಕ್ಷಣಕ್ಕೆ ಪ್ರವೇಶ: ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ 2018–19 ನೇ ಸಾಲಿಗೆ ಬಿ.ಎ, ಬಿ.ಕಾಂ, ಬಿಬಿಎಂ ಪದವಿ ಮತ್ತು ಸ್ನಾತಕೋತ್ತರ ಪದವಿಗಳಾದ ಎಂಎ,ಎಂಕಾಂ,ಎಂಎಸ್ಸಿಗೆ ನೋಂದಾಯಿಸಿಕೊಳ್ಳಲು ಏಪ್ರಿಲ್‌ 15 ರವರೆಗೆ ಅವಕಾಶ ನೀಡಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ವಿಳಂಬ ಶುಲ್ಕದೊಂದಿಗೆ ಅರ್ಜಿ ಶುಲ್ಕವನ್ನು (ಒಟ್ಟು ₹1000) ಪ್ರವೇಶಾತಿ ಶುಲ್ಕದ ಜೊತೆಗೆ ಪಡೆದು ನೇರವಾಗಿ ನಿರ್ದೇಶನಾಲಯದಲ್ಲಿ ಪ್ರವೇಶ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !