ಬ್ಯಾಂಕ್‌ ನೇಮಕಾತಿಯಲ್ಲಿ ಸ್ಥಳೀಯರಿಗೆ ಅವಕಾಶ ನೀಡಿ: ಚಂದ್ರಶೇಖರ್‌ ಆಗ್ರಹ

7

ಬ್ಯಾಂಕ್‌ ನೇಮಕಾತಿಯಲ್ಲಿ ಸ್ಥಳೀಯರಿಗೆ ಅವಕಾಶ ನೀಡಿ: ಚಂದ್ರಶೇಖರ್‌ ಆಗ್ರಹ

Published:
Updated:

ಬೆಂಗಳೂರು: ‘ಬ್ಯಾಂಕ್‌ಗಳಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿ ವೇಳೆ ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಯ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು’ ಎಂದು ಕಾಂಗ್ರೆಸ್‌ ಸದಸ್ಯ ಜಿ.ಸಿ. ಚಂದ್ರಶೇಖರ್‌ ಅವರು ರಾಜ್ಯ ಸಭೆಯಲ್ಲಿ ಆಗ್ರಹಿಸಿದರು.

ಶೂನ್ಯ ವೇಳೆಯಲ್ಲಿ ಗುರುವಾರ ಕನ್ನಡದಲ್ಲೇ ವಿಷಯ ಪ್ರಸ್ತಾಪಿಸಿದ ಅವರು, ‘10ನೇ ತರಗತಿವರೆಗೆ ಸ್ಥಳೀಯ ಭಾಷೆಯಲ್ಲಿ ಕಲಿತವರಿಗೆ 2016ರವರೆಗೆ ಬ್ಯಾಂಕಿಂಗ್‌ ನೇಮಕಾತಿಗಳಲ್ಲಿ ಅವಕಾಶ ಇತ್ತು. ಆದರೆ, ಈಗ ಐಬಿಪಿಎಸ್‌ ನಡೆಸುವ ನೇಮಕಾತಿಗಳಲ್ಲಿ ಈ ಅವಕಾಶ ಇಲ್ಲ. ಈ ವಿಷಯವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು. ಚಂದ್ರಶೇಖರ್‌ ಅವರು ಮಾತು ಮುಗಿಸುತ್ತಿದ್ದಂತೆ ಸಭಾಪತಿ ವೆಂಕಯ್ಯ ನಾಯ್ದ ಕನ್ನಡದಲ್ಲೇ ಧನ್ಯವಾದ ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !