ಮಂಗಳವಾರ, ಏಪ್ರಿಲ್ 13, 2021
32 °C
ಬನ್ನೇರುಘಟ್ಟ ರಸ್ತೆಯ ರಾಗಿಹಳ್ಳಿ ಗೇಟ್‌ ಬಳಿ ಅಪಘಾತ

ಶಾಲಾ ಬಸ್ ಪಲ್ಟಿ: ಹತ್ತು ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ರಾಗಿಹಳ್ಳಿ ಗೇಟ್‌ ಬಳಿ ಶಾಲಾ ಬಸ್ ಹಾಗೂ ಮ್ಯಾಕ್ಸಿಕ್ಯಾಬ್ ನಡುವೆ ಅಪಘಾತ ಸಂಭವಿಸಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತ ಸಂಭವಿಸುತ್ತಿದ್ದಂತೆ ಶಾಲಾ ಬಸ್‌ ರಸ್ತೆಯಲ್ಲೇ ಉರುಳಿಬಿದ್ದಿದೆ. ಈ ದೃಶ್ಯ ಬಸ್ಸಿನೊಳಗೆ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

‘ಇದೇ 9ರಂದು ಬೆಳಿಗ್ಗೆ 8.45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿದ್ದ ಚಾಲಕ, ವಿದ್ಯಾರ್ಥಿ ಹಾಗೂ ಸಹಾಯಕಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮ್ಯಾಕ್ಸಿ ಕ್ಯಾಬ್‌ನಲ್ಲಿದ್ದ ಚಾಲಕ ಹಾಗೂ ಆರು ಪ್ರಯಾಣಿಕರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ್ದ ಬಸ್, ವಿದ್ಯಾರ್ಥಿಯನ್ನು ಹತ್ತಿಸಿಕೊಂಡು ಮುಖ್ಯರಸ್ತೆ ಮೂಲಕ ಶಾಲೆಯತ್ತ ಹೊರಟಿತ್ತು. ಅದೇ ವೇಳೆ  ಅಡ್ಡರಸ್ತೆಯಿಂದ ಮುಖ್ಯರಸ್ತೆಗೆ ಬಂದ ಮ್ಯಾಕ್ಸಿಕ್ಯಾಬ್, ಶಾಲಾ ಬಸ್ಸಿಗೆ ಡಿಕ್ಕಿ ಹೊಡೆದಿತ್ತು. ರಸ್ತೆಯಲ್ಲೇ ಬಸ್ ಉರುಳಿಬಿತ್ತು. ಮ್ಯಾಕ್ಸಿಕ್ಯಾಬ್, ಕಂಪನಿಯೊಂದರ ಗೋಡೆಗೆ ಹೋಗಿ ಗುದ್ದಿತು’ ಎಂದು ಮಾಹಿತಿ ನೀಡಿದರು.

‘ಮ್ಯಾಕ್ಸಿಕ್ಯಾಬ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಸದ್ಯ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ವಶಕ್ಕೆ ಪಡೆಯಲಾಗುವುದು’ ಎಂದು ಪೊಲೀಸರು ಹೇಳಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು