ಬುಧವಾರ, ಮೇ 18, 2022
25 °C

12ರಂದು ಬಸವಶ್ರೀ ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಸವ ವೇದಿಕೆ ವತಿಯಿಂದ ಬಸವ ಜಯಂತಿ ಹಾಗೂ ‘ಬಸವಶ್ರೀ’, ‘ವಚನ ಸಾಹಿತ್ಯಶ್ರೀ ಪ್ರಶಸ್ತಿ’ ಪ್ರದಾನ ಸಮಾರಂಭ ಮೇ 12ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷ ಸಿ.ಸೋಮಶೇಖರ್‌ ತಿಳಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮವನ್ನು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಉದ್ಘಾಟಿಸಲಿದ್ದಾರೆ. ಬಸವಶ್ರೀ ಪ್ರಶಸ್ತಿಗೆ ಬಾಹ್ಯಾಕಾಶ ವಿಜ್ಞಾನಿ ಎ.ಎಸ್‌.ಕಿರಣ್‌ಕುಮಾರ್‌ ಹಾಗೂ ವಚನ ಸಾಹಿತ್ಯಶ್ರೀ ಪ್ರಶಸ್ತಿಗೆ ಕವಿ ಜರಗನಹಳ್ಳಿ ಶಿವಶಂಕರ್‌ ಹಾಗೂ ಸಾಹಿತಿ ಡಾ.ನಾ.ಮೊಗಸಾಲೆ ಆಯ್ಕೆಯಾಗಿದ್ದಾರೆ. ವಚನ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರಿಗೆ ತಲಾ ₹ 10 ಸಾವಿರ ಬಹುಮಾನ ನೀಡಲಾಗುವುದು ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು