ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಪ್ರತಿನಿಧಿಗಳ ಭಾವಚಿತ್ರಕ್ಕೆ ಅವಕಾಶವಿಲ್ಲ

ಮಹಾನಗರ ಪಾಲಿಕೆ ಜಾಹೀರಾತು
Last Updated 20 ನವೆಂಬರ್ 2018, 19:58 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಪಾಲಿಕೆ ವತಿಯಿಂದ ಅನುಷ್ಠಾನಗೊಳಿವ ಯೋಜನೆಗಳನ್ನು ಪ್ರಚಾರ ಪಡಿಸುವ ಸಂದರ್ಭದಲ್ಲಿ ಜನಪ್ರತಿನಿಧಿಗಳ ಹಾಗೂ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಭಾವಚಿತ್ರ ಬಳಸದಂತೆ ಪಾಲಿಕೆ ಸೋಮವಾರ ಸುತ್ತೋಲೆ ಹೊರಡಿಸಿದೆ.

‘ಯೋಜನೆಗಳನ್ನು ಅಥವಾ ಕಾಮಗಾರಿಗಳನ್ನು ಪ್ರಚಾರ ಮಾಡುವಾಗ ರಾಷ್ಟ್ರಪತಿ, ಪ್ರಧಾನಿ, ಮುಖ್ಯನ್ಯಾಯಮೂರ್ತಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಸಚಿವರು ಹಾಗೂ ರಾಷ್ಟ್ರದ ಪಿತಾಮಹರ ಭಾವಚಿತ್ರಗಳನ್ನು ಹೊರತುಪಡಿಸಿ ಬೇರಾವುದೇ ವ್ಯಕ್ತಿಗಳ ಭಾವಚಿತ್ರ ಮುದ್ರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಹಾಗಾಗಿ ಪಾಲಿಕೆ ವ್ಯಾಪ್ತಿಯ ಬಸ್‌ ನಿಲ್ದಾಣ, ಕುಡಿಯುವ ನೀರಿನ ಘಟಕ ಹಾಗೂ ಪಾಲಿಕೆ ಜಾಹೀರಾತುಗಳನ್ನು ಪ್ರದರ್ಶಿಸುವಾಗ ಸುಪ್ರೀಂ ಕೋರ್ಟ್‌ ಆದೇಶ ಪಾಲನೆ ಆಗುವಂತೆ ನೋಡಕೊಳ್ಳಬೇಕು’ ಎಂದು ಪಾಲಿಕೆ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಕೆಎಂಸಿ ಕಾಯ್ದೆ ತಿದ್ದುಪಡಿಗೆ ಪ್ರಸ್ತಾಪ: ಕಟ್ಟಡಗಳಿಗೆ ಸಂಬಂಧಿಸಿದಂತೆ 1976ರ ಕೆಎಂಸಿ ಕಾಯ್ದೆಯ ಕೆಲವೊಂದು ಸೆಕ್ಷನ್‌ಗಳಿಗೆ ತಿದ್ದುಪಡಿ ತರುವಂತೆ ಶಿಫಾರಸು ಮಾಡಿ ಪಾಲಿಕೆ ಆಯುಕ್ತರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT