ಶನಿವಾರ, ನವೆಂಬರ್ 23, 2019
18 °C

ಬಿಎಂಟಿಸಿ ಬಸ್‌ ಡಿಕ್ಕಿ: ವಿದ್ಯಾರ್ಥಿ ದುರ್ಮರಣ

Published:
Updated:

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಒಂಬತ್ತನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಮಾಗಡಿ ಮುಖ್ಯರಸ್ತೆಯ ಅಗ್ರಹಾರ ದಾಸರಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಅಗ್ರಹಾರ ದಾಸರಹಳ್ಳಿಯ ಆಯುಷ್ (14) ಮೃತ ವಿದ್ಯಾರ್ಥಿ. ವಿಜಯನಗರದ ಆರ್ಚಿಡ್ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಓದುತ್ತಿದ್ದ ಆಯುಷ್, ರಾತ್ರಿ 8 ಗಂಟೆ ಸುಮಾರಿಗೆ ಮನೆಯ ಮುಂಭಾಗದಲ್ಲಿಯೇ ಈ ದುರ್ಘಟನೆ ನಡೆದಿದೆ.

ವೀರೇಶ್‌ ಚಿತ್ರಮಂದಿರದ ಕಡೆಯಿಂದ ಕಾಮಾಕ್ಷಿಪಾಳ್ಯದ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಆಯುಷ್‌ಗೆ ಡಿಕ್ಕಿ ಹೊಡೆದಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತ
ಪಟ್ಟಿದ್ದಾನೆ.

ಈ ಕುರಿತು ವಿಜಯನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಕ್ರಿಯಿಸಿ (+)