ಸೋಮವಾರ, ಅಕ್ಟೋಬರ್ 14, 2019
24 °C

ರಾಜಕಾಲುವೆ ಅಭಿವೃದ್ಧಿ ತನಿಖೆಗೆ ಆದೇಶ

Published:
Updated:

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2016–17ರಲ್ಲಿ ₹800 ಕೋಟಿ ವೆಚ್ಚದಲ್ಲಿ ಕೈಗೊಂಡ ರಾಜಕಾಲುವೆ ಪುನಶ್ಚೇತನ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.

ರಾಜಕಾಲುವೆಗಳಲ್ಲಿನ ಹೂಳನ್ನು 2018–19ನೇ ಸಾಲಿನಲ್ಲಿ ಸುಮಾರು ₹29 ಕೋಟಿ ವೆಚ್ಚದಲ್ಲಿ ತೆಗೆಯಲಾಗಿದೆ. ಈ ಎರಡೂ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ದೊಡ್ಡಿಹಾಳ್‌ ತಂಡದ ಮೂಲಕ ಸಮಗ್ರ ತನಿಖೆ ನಡೆಸಿ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.

 

Post Comments (+)