ಸ್ಟಾರ್‌ ಹೋಟೆಲ್‌ನಲ್ಲಿ ಬಿಬಿಎಂಪಿ ಆಡಳಿತ: ಹೈಕೋರ್ಟ್ ಕಿಡಿ

ಬುಧವಾರ, ಏಪ್ರಿಲ್ 24, 2019
24 °C

ಸ್ಟಾರ್‌ ಹೋಟೆಲ್‌ನಲ್ಲಿ ಬಿಬಿಎಂಪಿ ಆಡಳಿತ: ಹೈಕೋರ್ಟ್ ಕಿಡಿ

Published:
Updated:

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸ್ಟಾರ್ ಹೋಟೆಲ್‌ಗಳಲ್ಲಿ ಕಚೇರಿ ಆಡಳಿತ ನಡೆಸುತ್ತಿದ್ದಾರೆ’ ಎಂದು ಹೈಕೋರ್ಟ್ ಮತ್ತೆ ಕಿಡಿ ಕಾರಿದೆ.

ನಾಕೋಡ ಕನ್ಸ್‌ಟ್ರಕ್ಷನ್ ಲಿಮಿಟೆಡ್‌ ಕಂಪನಿಯ ನಿರ್ದೇಶಕ ಮಹಾವೀರ ಗುಲೇಚಾ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಎನ್‌.ಸತ್ಯನಾರಾಯಣ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಅಧಿಕಾರಿಗಳ ಕಾರ್ಯ ವೈಖರಿಯನ್ನು ಮತ್ತೆ ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ‘ಇವರೆಲ್ಲಾ ಅನಭಿಷಿಕ್ತ ದೊರೆಗಳಂತೆ ಆಡಳಿತ ನಡೆಸುತ್ತಿದ್ದಾರೆ. ದಿನಾಲೂ ದೀಪಾವಳಿ ಆಚರಿ ಸುವ ಇವರು, ಮೈಗೆಲ್ಲಾ ಎಣ್ಣೆ ಹಚ್ಚಿಕೊಂಡು ಯಾರ ಹಿಡಿತಕ್ಕೂ ಸಿಕ್ಕದಂತಹ ಮನೆ ಹಾಳರಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿತು.

‘ಇದೇ 16ರೊಳಗೆ ವಾಲ್‌ಮಾರ್ಕ್ ಅಪಾರ್ಟ್‌ಮೆಂಟ್‌ನ ಅರ್ಹ ನಿವಾಸಿ ಗಳಿಗೆ ಸ್ವಾಧೀನ ಪ್ರಮಾಣ ಪತ್ರ (ಆಕ್ಯುಪೆನ್ಸಿ ಸರ್ಟಿಫಿಕೇಟ್‌–ಒ.ಸಿ) ನೀಡಬೇಕು’ ಎಂದು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

Tags: 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !