ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೆಕ್ಕಪರಿಶೋಧನೆ: ವಿವರ ಒದಗಿಸಲು ಸೂಚನೆ

Last Updated 15 ಡಿಸೆಂಬರ್ 2018, 19:55 IST
ಅಕ್ಷರ ಗಾತ್ರ

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಂತರಿಕ ಲೆಕ್ಕ ಪರಿಶೋಧನೆಗೆ ಸಂಬಂಧಿಸಿದ ಸಂಪೂರ್ಣ ವಿವರ ಒದಗಿಸಿ’ ಎಂದು ಪಾಲಿಕೆಗೆ ಹೈಕೋರ್ಟ್ ಸೂಚಿಸಿದೆ.

‘ಬಿಬಿಎಂಪಿಯ 2011ರಿಂದ 2015ರವರೆಗಿನ ಆರ್ಥಿಕ ವರ್ಷಗಳ ಸಮಗ್ರ ಲೆಕ್ಕಪರಿಶೋಧನೆ ನಡೆಸಲು ನಿರ್ದೇಶಿಸಬೇಕು’ ಎಂದು ಕೋರಿ ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಎಸ್‌. ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.‌

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಸಾರ್ವಜನಿಕ ವಲಯದ ಬ್ಯಾಂಕುಗಳು ಬಿಬಿಎಂಪಿಗೆ ಸಾಲ ನೀಡುತ್ತವೆ. ಈ ಬಗ್ಗೆ ಅಂಕಿ ಅಂಶಗಳನ್ನು ಪಾಲಿಕೆ ಸಂಗ್ರಹಿಸಬೇಕು. ಈ ಸಂಬಂಧ ಪಾಲಿಕೆ ಲೆಕ್ಕ ಪರಿಶೋಧನೆಯಲ್ಲಿ ಸೂಕ್ತ ಮಾಹಿತಿ ಇಲ್ಲವಾಗಿದೆ. ಅಲ್ಲದೆ, ಲೆಕ್ಕ ಪತ್ರಗಳನ್ನು ನಿರ್ವಹಣೆ ಮಾಡುತ್ತಿಲ್ಲ. ಈ ಪ್ರಕರಣದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ’ ಎಂದು ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಬಿಬಿಎಂಪಿಯ ಆಂತರಿಕ ಲೆಕ್ಕ ಪರಿಶೋಧನೆಗೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸಿ ಎಂದು ಸೂಚಿಸಿ, ವಿಚಾರಣೆಯನ್ನು 2019ರ ಜನವರಿ 30ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT