ಅಭಿವೃದ್ಧಿ ಶುಲ್ಕ ಪ್ರಶ್ನೆ: ಅತೃಪ್ತಿ

7

ಅಭಿವೃದ್ಧಿ ಶುಲ್ಕ ಪ್ರಶ್ನೆ: ಅತೃಪ್ತಿ

Published:
Updated:
ಬಿಬಿಎಂಪಿ

ಬೆಂಗಳೂರು: ಹೆಬ್ಬಾಳ ಸಮೀಪದ ನ್ಯಾಯಾಂಗ ಬಡಾವಣೆ ನಿವೇಶನವೊಂದಕ್ಕೆ ಅಭಿವೃದ್ಧಿ ಶುಲ್ಕ ಪಾವತಿಸುವಂತೆ ಮಾಲೀಕರಿಗೆ ಸೂಚಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಮಕ್ಕೆ ಹೈಕೋರ್ಟ್ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ.

ಈ ಕುರಿತಂತೆ ಡಿ.ಸಿ. ಸಹದೇವ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ‘ಬಡಾವಣೆಯಲ್ಲಿ ಎಷ್ಟು ನಿವೇಶನಗಳಿವೆ, ಅವುಗಳಲ್ಲಿ ಎಷ್ಟು ನಿವೇಶನಗಳಿಂದ ಅಭಿವೃದ್ಧಿ ಶುಲ್ಕ ಸಂಗ್ರಹಿಸಲಾಗಿದೆ. ಯಾವ ಕಾನೂನಿನಡಿ ಈ ಸೂಚನೆ ನೀಡಲಾಗಿದೆ’ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರು, ‘ಬಡಾವಣೆಯ ಯಾವ ನಿವೇಶನಕ್ಕೂ ಅಭಿವೃದ್ಧಿ ಶುಲ್ಕ ಸಂಗ್ರಹಿಸಿಲ್ಲ. ಆದರೆ, ನಮ್ಮ ಅರ್ಜಿದಾರರಿಗೆ ಮಾತ್ರ ನಕ್ಷೆ ಮಂಜೂರು ಮಾಡದೆ ಕಿರುಕುಳ ನೀಡಲಾಗುತ್ತಿದೆ’ ಎಂದರು.

ಇದಕ್ಕೆ ನ್ಯಾಯಮೂರ್ತಿಗಳು, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳು ಸಮರ್ಪಕ ಪ್ರಮಾಣಪತ್ರ ಸಲ್ಲಿಸಿಲ್ಲ. ಮೇಲ್ನೋಟಕ್ಕೆ ಇದರಲ್ಲಿ ಅಧಿಕಾರ ದುರ್ಬಳಕೆ ಕಂಡು ಬರುತ್ತಿದೆ. ಈ ಕುರಿತು ಎಸಿಬಿ ತನಿಖೆಗೆ ಆದೇಶಿಸಬೇಕಾಗುತ್ತದೆ’ ಎಂದು ಕಿಡಿ ಕಾರಿದರು.

‘ಸೂಕ್ತ ಪ್ರಮಾಣಪತ್ರ ಸಲ್ಲಿಸಿ’ ಎಂದು ಬಿಬಿಎಂಪಿಗೆ ಸೂಚಿಸಿದ ನ್ಯಾಯಮೂರ್ತಿಗಳು, ಅರ್ಜಿ ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಿದರು.

 

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !