ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಆಸ್ಪತ್ರೆ ವೈದ್ಯೆ ಆತ್ಮಹತ್ಯೆ

Last Updated 16 ಅಕ್ಟೋಬರ್ 2018, 18:22 IST
ಅಕ್ಷರ ಗಾತ್ರ

ಬೆಂಗಳೂರು: ನಂದಿನಿ ಲೇಔಟ್ ಸಮೀಪದ ಕೃಷ್ಣಾನಂದ ನಗರದ ಬಿಬಿಎಂಪಿ ಆಸ್ಪತ್ರೆಯ ವೈದ್ಯೆ ಡಾ. ಅಶ್ವಿನಿ (32) ನೇಣು ಹಾಕಿಕೊಂಡು ಸೋಮವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು, ಬೌರಿಂಗ್ ಆಸ್ಪತ್ರೆಯ ವೈದ್ಯ ಡಾ. ಲೋಹಿತ್ ಎಂಬುವರನ್ನು ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು.ಆರಂಭದಲ್ಲಿ ಚೆನ್ನಾಗಿದ್ದ ದಂಪತಿಯ ನಡುವೆ ಒಂದೂವರೆ ವರ್ಷದ ಹಿಂದೆ ಮನಸ್ತಾಪ ಉಂಟಾಗಿತ್ತು. ಪತಿಯ ಮನೆ ತೊರೆದಿದ್ದ ಅಶ್ವಿನಿ, ಪೋಷಕರ ಜೊತೆ ನೆಲೆಸಿದ್ದರು ಎಂದು ಪೊಲೀಸರು ಹೇಳಿದರು.

‘ಲೋಹಿತ್‌ ಅವರು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದರು. ಅದರಿಂದಾಗಿ ಅಶ್ವಿನಿ, ಬಹಳ ನೊಂದಿದ್ದರು. ಲೋಹಿತ್ ಹಾಗೂ ಅವರ ಪೋಷಕರ ಕಿರುಕುಳವೇ ಈ ಆತ್ಮಹತ್ಯೆಗೆ ಕಾರಣ ಎಂದು ಪೋಷಕರು ದೂರು ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ಮರಣಪತ್ರ ಸಿಕ್ಕಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT