ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯನಿರ್ವಾಹಕ ಎಂಜಿನಿಯರ್ ಪಾಲಿಕೆಯ ಜಂಟಿ ಆಯುಕ್ತ!

Last Updated 5 ಆಗಸ್ಟ್ 2019, 19:22 IST
ಅಕ್ಷರ ಗಾತ್ರ

ಬೆಂಗಳೂರು: ಸಾಮಾನ್ಯವಾಗಿ ಬಿಬಿಎಂಪಿಯ ಜಂಟಿ ಆಯುಕ್ತ ಹುದ್ದೆಗೆ ಐಎಎಸ್‌ ಅಥವಾ ಕೆಎಎಸ್‌ (ಹಿರಿಯ ಶ್ರೇಣಿ) ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ. ಇದೇ ಮೊದಲ ಬಾರಿಗೆ ಕಾರ್ಯನಿರ್ವಾಹಕ ಎಂಜಿನಿಯರ್‌ ಒಬ್ಬರನ್ನು ಈ ಹುದ್ದೆಗೆ ನೇಮಕ ಮಾಡಲಾಗಿದೆ.

ಡಾ.ಡಿ.ಆರ್‌.ಅಶೋಕ್‌ ಅವರು ಪಾಲಿಕೆಯ ದಾಸರಹ‌ಳ್ಳಿ ವಲಯ ಜಂಟಿ ಆಯುಕ್ತರಾಗಿದ್ದರು. ಅವರ ಜಾಗಕ್ಕೆ ರಾಜೀವ್‌ ಗಾಂಧಿ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ (ಸಾಮಾಜಿಕ ಅಭಿವೃದ್ಧಿ) ಎಸ್.ಎನ್‌.ಪರಶುರಾಮೇಗೌಡ ಅವರನ್ನು ನೇಮಕ ಮಾಡಲು ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಜುಲೈ 19ರಂದು ನಗರಾಭಿವೃದ್ಧಿ ಇಲಾಖೆಯ ವಶಕ್ಕೆ ನೀಡಿತು. ಪರಶುರಾಮೇಗೌಡ ಅವರನ್ನು ನೇಮಕ ಮಾಡಿ ನಗರಾಭಿವೃದ್ಧಿ ಇಲಾಖೆ ಜುಲೈ 22ರಂದು ಆದೇಶ ಹೊರಡಿಸಿತು. ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದ ಅವಧಿಯಲ್ಲೇ ತರಾತುರಿಯಲ್ಲಿ ಈ ನೇಮಕ ಪ್ರಕ್ರಿಯೆ ನಡೆದಿದೆ. ಈ ನೇಮಕಾತಿಗೆ ಹಿರಿಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನು ಗಣನೆಗೆ ತೆಗೆದುಕೊಳ್ಳದೆ ಪ್ರಕ್ರಿಯೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ಪರಶುರಾಮೇಗೌಡ ಅವರು ಪೌರಾಡಳಿತ ನಿರ್ದೇಶನಾಲಯದ ಎಂಜಿನಿಯರ್‌. ಬಳಿಕ ಅವರನ್ನು ರಾಜೀವ್‌ ಗಾಂಧಿ ನಿಗಮಕ್ಕೆ ವರ್ಗಾವಣೆ ಮಾಡಲಾಗಿತ್ತು.

‘ಪ್ರತಿ ವಲಯಕ್ಕೆ ಜಂಟಿ ಆಯುಕ್ತರ ಜತೆಗೆ ಮುಖ್ಯ ಎಂಜಿನಿಯರ್‌ಗಳನ್ನು ನೇಮಕ ಮಾಡಲಾಗುತ್ತದೆ. ಮುಖ್ಯ ಎಂಜಿನಿಯರ್‌ಗಳು ಕಾರ್ಯದರ್ಶಿ ಹುದ್ದೆಯ ದರ್ಜೆಯವರು. ದಾಸರಹಳ್ಳಿ ವಲಯದ ಮುಖ್ಯ ಎಂಜಿನಿಯರ್ ಅವರು ಅಧೀನ ಅಧಿಕಾರಿಯ ಕೆಳಗೆ ಕೆಲಸ ಮಾಡಬೇಕಿದೆ’ ಎಂದು ಪಾಲಿಕೆಯ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT