ಬಿಬಿಎಂಪಿ: 867 ಹುದ್ದೆ ಶೀಘ್ರ ಭರ್ತಿ

7

ಬಿಬಿಎಂಪಿ: 867 ಹುದ್ದೆ ಶೀಘ್ರ ಭರ್ತಿ

Published:
Updated:

ಬೆಂಗಳೂರು: ಬಿಬಿಎಂಪಿಯು ಖಾಲಿಯಿರುವ ಹುದ್ದೆಗಳ ಪೈಕಿ 867 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ನಿರ್ಧರಿಸಿದೆ. 

ಪಾಲಿಕೆಯಲ್ಲಿ 17,391 ಹುದ್ದೆಗಳು ಇವೆ. ಈ ಪೈಕಿ 10 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಇರುವ ಅಧಿಕಾರಿ/ ಸಿಬ್ಬಂದಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗುತ್ತಿತ್ತು. ಇದರಿಂದ ನೌಕರರ ಮೇಲೆ ಒತ್ತಡವೂ ಹೆಚ್ಚುತ್ತಿತ್ತು. ಪಾಲಿಕೆಯ ಕಾರ್ಯಚಟುವಟಿಕೆ ಮೇಲೆ ಪರಿಣಾಮವಾಗುತ್ತಿತ್ತು.

ಈಗ 17 ವಿಭಾಗಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಪ್ರಕ್ರಿಯೆಗಾಗಿ ಕೆಪಿಎಸ್‌ಸಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಪಾಲಿಕೆ ಮೂಲಗಳು ಹೇಳಿವೆ.

Tags: 

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !