ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಬಿಎಂಪಿಯಿಂದ ₹350 ಕೋಟಿ ತೆರಿಗೆ ಬಾಕಿ’

Last Updated 9 ನವೆಂಬರ್ 2018, 20:39 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಬಿಎಂಪಿ, ಗ್ರಂಥಾಲಯ ಇಲಾಖೆಗೆ ಪಾವತಿಸಬೇಕಾದ ₹350 ಕೋಟಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಈ ಹಣ ಕೈ ಸೇರಿದ್ದಲ್ಲಿ ನಗರದ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಬಹುದಾಗಿದೆ’ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಎಸ್.ಹೊಸಮನಿ ತಿಳಿಸಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಪಶ್ಚಿಮ ವಲಯದ ನಗರ ಕೇಂದ್ರ ಗ್ರಂಥಾಲಯದ ಸಹಯೋಗ
ದಲ್ಲಿ ಶುಕ್ರವಾರ ಗೋಪಾಲನ್ ಮಾಲ್‌ನಲ್ಲಿ ಏರ್ಪಡಿಸಿದ್ದ ಪುಸ್ತಕದಾನ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ರಾಜ್ಯದಲ್ಲಿ ಸದ್ಯ 2,000 ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿವೆ.ಕೇರಳದ ಸಾಯಿ ಸಂಜೀವಿನಿ ಟ್ರಸ್ಟ್‌ನ ಸಹಯೋಗದಲ್ಲಿ 433 ಗ್ರಂಥಾಲಯಗಳ ಡಿಜಿಟಲೀಕರಣ ಪ್ರಕ್ರಿಯೆ ನಡೆಯುತ್ತಿದೆ’ ಎಂದೂ ಹೇಳಿದರು.

ಸಾಹಿತ್ಯ ಪರಿಷತ್ತಿನಿಂದ 5,000 ಪುಸ್ತಕಗಳನ್ನು ದೇಣಿಗೆಯಾಗಿ ನೀಡಲಾಗುವುದು’ ಎಂದುಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ‌ ಭರವಸೆ ನೀಡಿದರು.

ಸಾಹಿತಿ ಶೂದ್ರ ಶ್ರೀನಿವಾಸ್ ಅಭಿಯಾನಕ್ಕೆ ಚಾಲನೆ ನೀಡಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ, ಪತ್ರಕರ್ತ ವಿಶ್ವೇಶ್ವರ ಭಟ್ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT