ಗುರುವಾರ , ಆಗಸ್ಟ್ 13, 2020
23 °C

ಎರಡೇ ದಿನಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ವರ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಡಾ.ಆರ್‌.ವಿಶಾಲ್‌ ಅವರನ್ನು ರಾಜ್ಯ ಸರ್ಕಾರ ಸೋಮವಾರ ನೇಮಿಸಿದೆ.

ಸುಮಾರು ಎಂಟು ತಿಂಗಳಿಂದ ಜಿಲ್ಲಾಧಿಕಾರಿಯಾಗಿದ್ದ ಡಾ.ಎಸ್‌.ಬಿ.ಬೊಮ್ಮನಹಳ್ಳಿ ಅವರನ್ನು ಶನಿವಾರ ವರ್ಗಾವಣೆ ಮಾಡಲಾಗಿತ್ತು. ಆ ಸ್ಥಾನಕ್ಕೆ ಉಜ್ವಲ್‌ ಕುಮಾರ್ ಘೋಷ್‌ ಅವರನ್ನು ನೇಮಿಸಿತ್ತು. ಘೋಷ್‌ ಅವರನ್ನು ಎರಡೇ ದಿನಕ್ಕೆ ವರ್ಗಾಯಿಸಲಾಗಿದೆ.

ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಾಲಕ್ಕಿ ಗೌಡ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ, ಆ ಸ್ಥಾನಕ್ಕೆ ಡಾ. ಅವಿನಾಶ್‌ ಮೆನನ್‌ ರಾಜೇಂದ್ರನ್ ಅವರನ್ನು ನೇಮಿಸಿದೆ. ಯಾಲಕ್ಕಿ ಗೌಡ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿಯವರು. ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಅವರನ್ನು ವರ್ಗ ಮಾಡಲಾಗಿದೆ.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು