ಅಪಘಾತ: ಬೈಕ್ ಸವಾರ ಸಾವು

ಶುಕ್ರವಾರ, ಏಪ್ರಿಲ್ 26, 2019
24 °C

ಅಪಘಾತ: ಬೈಕ್ ಸವಾರ ಸಾವು

Published:
Updated:
Prajavani

ದಾಬಸ್‌ಪೇಟೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಎಡೇಹಳ್ಳಿ ಹತ್ತಿರ ಸೋಮವಾರ ಬೆಳಿಗ್ಗೆ, ಕಾರು ಮತ್ತು ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ವೀರಭದ್ರಯ್ಯ(60) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹಿಂಬದಿ ಸವಾರ ಲಕ್ಷ್ಮಯ್ಯ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತ ವೀರಭದ್ರಯ್ಯ ವೀರಸಾಗರ ಗ್ರಾಮದವರಾಗಿದ್ದು, ಕಾರ್ಖಾನೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. 

ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. 

ಅಪಘಾತವಾಗುತ್ತಿದಂತೆ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !